ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ.
ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.
ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ ಪೆರುಮಾಳ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ :
ಮುದ್ದಿನಕೊಪ್ಪ ರಸ್ತೆಯ ಬಳಿ ರಸ್ತೆಕಾಮಗಾರಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ರಸ್ತೆ ದಾಟುವಾಗ ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಬುಲೆರೋ ಗೂಡ್ಸ್ ವಾಹನ ಅತಿವೇಗದಲ್ಲಿ ಬಂದ ಕಾರಣ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿ ಹೊಡೆದ ನಂತರ ಬುಲೆರೋ ವಾಹನವನ್ನ ಚಾಲಕ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಆಯನೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಟಿವಿಎಸ್ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸವಾರ ಪೆರುಮಾಳ್ ಗೆ ಕಾಲು ಮುರಿದಿದೆ.ನಂತರ ಬಲಭಾಗದಲ್ಲಿ ವಾಹನ ಪಲ್ಟಿ ಹೊಡೆದು ನಿಂತಿದೆ.ಬುಲೆರೋ ವಾಹನದಲ್ಲಿರುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈತನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುಂಸಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್