ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್

ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ.

ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು.
ಒಟ್ಟು 518 ಸ್ವತ್ತು ಕಳವು, 6 ದರೋಡೆ ಪ್ರಕರಣ, 54 ಸುಲಿಗೆ ಪ್ರಕರಣ, 151 ಕನ್ನ ಕಳವು ಪ್ರಕರಣ ಸೇರಿರುತ್ತದೆ. ಇದರಲ್ಲಿ ಒಟ್ಟು 231 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ಅಂದಾಜು ಮೌಲ್ಯ 1,22,10,959 ರೂ. ಆಗಿರುತ್ತದೆ. ಒಟ್ಟು 2 ಕೆಜಿ 87 ಗ್ರಾಂ ಬಂಗಾರದ ಆಭರಣಗಳು, 14,394 ಗ್ರಾಂ ಬೆಳ್ಳಿ ಆಭರಣಗಳು, 73 ವಾಹನಗಳು, 27 ಮೊಬೈಲ್ ಫೋನ್ ಗಳು, 6 ಜಾನುವಾರುಗಳು, 39 ಕ್ವಿಂಟಾಲ್ ಅಡಿಕೆ, ಎಲೆಕ್ಟ್ರಾನಿಕ್ ವಸ್ತು ಹಾಗೂ ಇತರ ವಸ್ತುಗಳು ಎಲ್ಲಾ ಸೇರಿ 3,03,59,000 ರೂ.ಗಳ ಮಾಲನ್ನು ಪತ್ತೆ ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ಕಳವು ಪ್ರಕರಣಗಳಲ್ಲಿ ಕೂಡಲೇ ಸ್ಪಂದಿಸಿ ಹಲವು ತಂಡಗಳ ರಚನೆ ಮಾಡಿ ಕಾರ್ಯಾಚರಣೆ ನಡೆಸಿ ರಿಕವರಿ ಮಾಡಲು ಯಶಸ್ವಿಯಾಗಿದೆ. ಇತ್ತೀಚೆಗೆ ಅಡಿಕೆ ಕಳವು ಪ್ರಕರಣ ಜಾಸ್ತಿ ವರದಿಯಾಗುತ್ತಿವೆ. ಈವರೆಗೆ ಒಟ್ಟು 928 ಪ್ರಕರಣಗಳು ದಾಖಲಾಗಿದ್ದು, ಮೊಬೈಲ್ ರಾಬರಿ ಪ್ರಕರಣಗಳನ್ನು ಕಂಡು ಹಿಡಿದಿದ್ದೇವೆ. ಕಳ್ಳತನ ಪುನಾರವರ್ತನೆ ಮಾಡಿದ ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ. ಅದರಲ್ಲಿ ಹೊರ ರಾಜ್ಯದವರು ಇದ್ದಾರೆ.
ಚಿಕ್ಕಮರಡಿ, ಭದ್ರಾವತಿ, ಶಿವಮೊಗ್ಗದ ಒಟ್ಟು 8 ಡಕಾಯಿತಿ ಪ್ರಕರಣಗಳನ್ನು ಭೇದಿಸಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು ಜಿಲ್ಲೆಯಲ್ಲಿ 177 ದ್ವಿಚಕ್ರ ಮತ್ತು 4 ಚಕ್ರದ ವಾಹನ ಕಳ್ಳತನವಾಗಿದ್ದು, 78 ರಿಕವರಿಯಾಗಿದೆ.

ಈ ಸಂದರ್ಭದಲ್ಲಿ ಕಳವು ಪ್ರಕರಣ ಮತ್ತು ಇನ್ನಿತರ ಪ್ರಕರಣಗಳಲ್ಲಿ ಶಕ್ತಿಮೀರಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ ಅವರು ಅಭಿನಂದನೆ ಸಲ್ಲಿಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಶೇಖರ್, ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ಈಶ್ವರ ನಾಯ್ಕ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂತ್ರಸ್ಥರಿಗೆ ರಿಕವರಿಯಾದ ಅವರ ಸ್ವತ್ತನ್ನು ಮರುಕ ಳಿಸಲಾಯಿತು. ಅವರು ಕೂಡ ಪೊಲೀಸರ ಕಾರ್ಯಕ್ಕೆ ಅಭಿನಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

4 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago