ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.

02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ ಹಾಗೂ ಬೆಂಕಿ ಪೊಟ್ಟಣ ಕೇಳುವ ನೆಪದಲ್ಲಿ ಚಾಕುವನ್ನು ತೋರಿಸಿ ಬೆದರಿಕೆ ಹಾಕಿ ನಗದು ಹಣ, ಮೊಬೈಲ್ ಫೋನ್ ಹಾಗೂ ಬಂಗಾರದ ಸರವನ್ನು ಸುಲಿಗೆ ಮಾಡಿಕೊಂಡು ಹೋದ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ 02  ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯಲ್ಲಿ 01  ಪ್ರಕರಣ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಹಾಗೂ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ 03 ಪ್ರಕರಣಗಳು ಸೇರಿದಂತೆ ಒಟ್ಟು 07 ಪ್ರಕರಣಗಳು ದಾಖಲಾಗಿತ್ತು.
ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಬೈಕ್ ನಲ್ಲಿ ಬಂದ ಪರಶುರಾಮ್, ಉಮಾವತಿ ಹಾಗೂ ಕೊರಿಯರ್ ಸಿಬ್ಬಂದಿಗೆ ಚಾಕು ತೋರಿಸಿ ಹಣ ಮತ್ತು ಮೊಬೈಲ್ ನ್ನ ಕಿತ್ತುಕೊಂಡು ಹೋಗಿದ್ದರು.
ಅದೇ ರೀತಿ ಕೋಟೆ ಪೊಲೀಸ್ ಠಾಣೆಯಲ್ಲಿ ಜಿ.ಆರ್ ವೆಂಕಟೇಶ್ ಕುಮಾರ್ ಮತ್ತು ಮೋಹನ್ ರಾಜ್ ರ ಮೊಬೈಲ್ ಮತ್ತು ಹಣವನ್ನ ಕಿತ್ತುಕೊಂಡು ಹೋಗಿದ್ದರು. ಮತ್ತು ತುಂಗ ನಗರ ಪೊಲೀಸ್ ಠಾಣೆಯಲ್ಲಿ ಶಾಹೀನಾ ಬಾನು ಅವರ ವ್ಯಾನಿಟಿ ಬ್ಯಾಗ್ ಕಿತ್ತುಕೊಂಡು ಹೋಗಿದ್ದರು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿಯೂ ಸಹ ಇದೇ ಮೂರು ಗ್ಯಾಂಗ್ ದರೋಡೆ ನಡೆಸಿತ್ತು.
ರಾತ್ರಿ ಇಡೀ ದರೋಡೆಯಲ್ಲಿ ಮುಳುಗಿದ್ದ ಮೂವರನ್ನ ಕೋಟೆ ಪೊಲೀಸರು ಬಂದಿಸಿದ್ದಾರೆ. ಆಯನೂರು ಗೇಟ್ ಬಳಿ ನಿವಾಸಿಯ ಗಗನ್ ಯಾನೆ ಬ್ರೋ, ಬೊಮ್ಮನ್ ಕಟ್ಟೆ ಎಫ್ ಬ್ಲಾಕ್ ನ ನಿವಾಸಿ ವಿಶಾಲ್ ಯಾನೆ ಕುಟ್ಟ, ಪ್ರೀತಮ್ ಯಾನೆ ಸ್ಮಾಟಿ ಎಂಬವರನ್ನ ಕೋಟೆ ಪೊಲೀಸರು ಬಂಧಿಸಿದ್ದಾರೆ.
ಈ ಮೂವರೂ 19 ವರ್ಷದ ಯುವಕರಾಗಿದ್ದಾರೆ.‌ ವಿಶಾಲ್ ಮತ್ತು ಗಗನ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಬೇಕಾದವನಾಗಿದ್ದಾನೆ. ಗಗನ್ ಮತ್ತು ವಿಶಾಲ್ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದವರು. ಪ್ರೀತಮ್ ಪೈಂಟಿಂಗ್ ಕೆಲಸ ಮಾಡುವವನಾಗಿದ್ದಾನೆ.

ಆರೋಪಿತರಿಂದ  ಬಜಾಜ್ ಪಲ್ಸರ್ ಬೈಕ್, 10 ಮೊಬೈಲ್ ಫೋನ್ ಗಳು, 01 ವ್ಯಾನಿಟಿ ಬ್ಯಾಗ್ ಮತ್ತು ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬೆಳ್ಳಿಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

19 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

19 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

19 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

24 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago