ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು.


ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು.
ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು.

ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು ತಾಳಗುಪ್ಪಕ್ಕೆ ತತಕ್ಷಣ ಧಾವಿಸಿ ಸಮಸ್ಯೆಯನ್ನು ಆಲಿಸಿ ಜಿಲ್ಲಾಧಿಕಾರಿಗಳ ಸುತ್ತೋಲೆಯನ್ನು ಸಹ ಮಷಿನ್ ನ ವಾರಸುದಾರರಿಗೆ ತೋರಿಸಿ ಸರ್ಕಾರದ ಈ ಕ್ರಮದಂತೆ ಹಣವನ್ನು ಪಡೆಯಬೇಕು ಇಲ್ಲದಿದ್ದರೆ ನಿಮ್ಮ ಮೇಲೆ ಸೂಕ್ತವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಆದೇಶಿಸಿ ನಂತರ ರೈತರು ಹಾಗೂ  ಭತ್ತದ ಮಷಿನ್ ಕೊಯ್ಯುವವರ ನಡುವೆ ಸಮನ್ವಯ ಸಾಧಿಸುವಂತೆ ಮನವೊಲಿಸಿ ರೈತರಿಗೆ ತೊಂದರೆಯಾಗದಂತೆ ಕೆಲಸವನ್ನು ಮಾಡಿಕೊಡಬೇಕೆಂದು ಸೂಚಿಸಿದರು.

ಸಹಾಯಕ ಕೃಷಿ ನಿರ್ದೇಶಕರನ್ನು ಅಭಿನಂದಿಸಿದ ರೈತರು::

ಬೆಳ್ಳಂಬೆಳಿಗ್ಗೆಯಿಂದಲೇ ರೈತರು ಮಷಿನ್ ವಾರಸುದಾರರೊಂದಿಗೆ ಜಟಾಪಟಿ ನಡೆಸುತ್ತಿದ್ದರೂ ಕೂಡ ಬಗ್ಗದ ಏಜೆಂಟರುಗಳು ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರ ಮಾತಿಗೆ ಬೆಲೆಕೊಟ್ಟು ಬೆಲೆಯ ವಿಚಾರವಾಗಿ ರೈತರೊಂದಿಗೆ ಸಮನ್ವಯ ಸಾಧಿಸುತ್ತೇವೆಂದು ಒಪ್ಪಿಕೊಂಡರು.ಇದರಿಂದ ಸಂತಸಗೊಂಡ ರೈತರು ನಮ್ಮ ಹಕ್ಕು ನಮಗೆ ಸಿಕ್ಕಿದೆ ಮಧ್ಯಪ್ರವೇಶಿಸಿ ಸಮನ್ವಯ ಸಾಧಿಸಿದ್ದಕ್ಕಾಗಿ ಸಹಾಯಕ ಕೃಷಿ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ನಮ್ಮ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.


ವರದಿ: ಪವನ್ ಕುಮಾರ್ ಕಠಾರೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago