ರಿಪ್ಪನ್‌ಪೇಟೆ:ಸಾಗರ ಕ್ಷೇತ್ರದ ಶಾಸಕರು ಸಾಗರ ಮತ್ತು ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡದೆ ಕೇವಲ ಕೊರೊನಾ ನೆಪದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಗಂಭೀರವಾಗಿ ಆರೊಪಿಸಿದರು.
ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಳೆದ ತಿಂಗಳು ನಡೆದಂತಹ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸುವ ಮೂಲಕ ನೈಜ ಮತದಾನ ಮಾಡುವ ಮೂಲಕ ಪಕ್ಷದ ಬಲವರ್ಧನೆಗೆ ಕಾರಣವಾಗಿದೆ. ಅದೆ ರೀತಿ ಸಿಂಧಗಿಯಲ್ಲಿ ಕಳೆದ ಸಾರ್ವರ್ತಿಕ ಚುನಾವಣೆಯಲ್ಲಿ ಕೇವಲ ಇಪ್ಪತ್ತು ಸಾವಿರ ಮತಗಳನ್ನು ಗಳಿಸಿದ್ದು ಜೆ.ಡಿ.ಎಸ್ ಜಯಭೇರಿ ಬಾರಿಸಿತ್ತು ಆದರೆ ಈ ಭಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಬಂದಿರುವುದು ಮುಂದಿನ ಚುನಾವಣೆಗೆ ಪಕ್ಷ ಬಲಿಷ್ಟಗೊಳ್ಳುವ ಮೂನ್ಸೂಚನೆ ನೀಡಿದೆ ಎಂದರು.
ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಸಿ ಅಂಗಡಿ ಮತ್ತು ಇನ್ನಿತರ ಸಣ್ಣ ಪುಟ್ಟ ಅಂಗಡಿಗಳಲಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಸಲಾಗುತ್ತಿದ್ದು ಒಂದು ರೀತಿಯಲ್ಲಿ ಸಂಪೂರ್ಣ ಕ್ಷೇತ್ರವೇ ಕುಡುಕರ ಸಾಮ್ರಾಜ್ಯದಂತಾಗಿದ್ದು ಬರುವ ಹಣವನ್ನು ಜೇಬಿಗೆ ಇಳಿಸುವ ಕಾಯಕದಲ್ಲಿ ಎಂ.ಎಸ್.ಐ.ಎಲ್ ಅಧ್ಯಕ್ಷರು ತಲ್ಲೀನರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದೇ 21ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಗೆ ಅಭ್ಯರ್ಥಿಗಳ ಪರ ಬಿ.ಜೆ.ಪಿ ರಾಜಕೀಯ ಮಾಡುತ್ತಿರುವುದು ತರವಲ್ಲ ಸಾಹಿತ್ಯ ಪರಿಷತ್ತು ತನ್ನದೆ ಆದ ನೆಲಗಟ್ಟಿನ ಮೇಲೆ ಕನ್ನಡ ಸಾಹಿತ್ಯ ಭಾಷೆ ಇನ್ನಿತರ ವಿಚಾರದಲ್ಲಿ ರಾಜಕೀಯ ಬೆರೆಸದೆ ಈ ವರೆಗೂ ಅಳವಡಿಸಿಕೊಂಡು ಬಂದತಹ ಸಿದ್ಧಾಂತವನ್ನು ಈ ಬಾರಿಯ ಚುನಾವಣೆಯಲ್ಲಿ ಗಾಳಿಗೆ ತೂರಿರುವುದು ಬಿ.ಜೆ.ಪಿ ಗೆ ಶೋಭೆ ತರದು ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಡಿ.ಈ.ಮಧುಸೂಧನ್, ಅರಸಾಳು ಗ್ರಾ.ಪಂ.ಅಧ್ಯಕ್ಷ ಉಮಾಕರ, ಮುಂಡಗೋಡು ನಾಗಪ್ಪ, ಉಲ್ಲಾಸ್, ರಾವಣಕಟ್ಟೆ ನಾಗಪ್ಪ, ರಾಜಪ್ಪಗೌಡ ಶೆಟ್ಟಿಬೈಲು, ನವೀನ ಇನ್ನಿತರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್