ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.

ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ.

ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ ಮಾರ್ಗವಾಗಿ ಹಿಂಬಾಲಿಸಿದ್ದಾರೆ. ಶಿವಮೊಗ್ಗ ಮಾರ್ಗವಾಗಿ ಹೋಗುತ್ತಿರುವ ದನಗಳ್ಳರ ವಾಹನವನ್ನು ತಡೆದು ನಿಲ್ಲಿಸುವಂತೆ ರಾಜೀವ್ ರಿಪ್ಪನ್ ಪೇಟೆ ಪೊಲೀಸರಿಗೆ ಸೂಚಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆದ  ರಿಪ್ಪನ್ ಪೇಟೆಯ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ತಡೆಗೊಳಿಸಿದ್ದರು.ಆದರೆ ಏಕಾಏಕಿ ನುಗ್ಗಿ ಬಂದ ದನಗಳ್ಳರ ವಾಹನ ಬ್ಯಾರಿಕೇಡ್ ನ್ನು ಲೆಕ್ಕಿಸದೇ ವಾಹನ ಚಲಾಯಿಸಿ ಮುನ್ನುಗ್ಗಿದ್ದಾರೆ ಈ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಿಪ್ಪನ್ ಪೇಟೆಯ ಇಬ್ಬರು ಪೊಲೀಸರು ಅದೃಷ್ಟಾವಶತ್ ಬದುಕುಳಿದಿದ್ದಾರೆ.ಇಲ್ಲದಿದ್ದಲ್ಲಿ ಪಾಪಿ ದನಗಳ್ಳರು ಪೊಲೀಸ್ ಪೇದೆಗಳ ಮೇಲೆಯೇ ಗಾಡಿ ಹಾಯಿಸಲು ರೆಡಿಯಾಗಿ ಬಂದಿದ್ದರು.

ನಂತರ ವಾಹನ ಹಿಮ್ಮೆಟ್ಟಿಸಿಕೊಂಡು ಬಂದ ತಹಸಿಲ್ದಾರ್ ರಾಜೀವ್ ರವರ ಗಾಡಿಯಲ್ಲಿಯೇ ಸೂಡೂರು ಚೆಕ್ ಪೋಸ್ಟ್ ವರೆಗೂ ಬೆನ್ನತ್ತಿದ್ದ  ರಿಪ್ಪನ್ ಪೇಟೆ ಪೊಲೀಸರು ನಂತರ ದನ ಸಾಗಿಸುತ್ತಿದ್ದ ವಾಹನದ ನಂಬರನ್ನು ಕಂಟ್ರೊಲ್ ಪೊಲೀಸರಿಗೆ ನೀಡಿದ್ದಾರೆ. ನಂತರ ವಾಹನದ ನಂಬರ್ ಟ್ರಾಕ್ ಮಾಡಿದಾಗ  ಶಿವಮೊಗ್ಗದಲ್ಲಿ ಅದು ಪತ್ತೆಯಾಗಿದೆ.

ಪೊಲೀಸರು ಎಂಟು ಗೋವುಗಳ ಸಮೇತ ಕಳ್ಳರನ್ನು ಬಂಧಿಸಿದ್ದಾರೆ. ಸುತ್ತಾ ಗ್ರಾಮದ ಇಬ್ಬರು ದನ ಕಳುವಿಗೆ ನೆರವಾಗಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ದನ ಖರೀದಿಸಿದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ದನ ಕಳ್ಳತನಕ್ಕೆ ಸ್ವಗ್ರಾಮದವರೇ ನೆರವಾಗಿರುವುದು ನಿಜಕ್ಕೂ ವಿಪರ್ಯಾಸ. ಜನರ ಕರೆಗೆ ಓಗೊಟ್ಟು ದನಗಳ್ಳರನ್ನು ಹಿಮ್ಮೆಟ್ಟಿಸಲು ಅಣಿಯಾದ ತಹಸಿಲ್ದಾರ್ ಕಾರ್ಯಕ್ಕೆ ಸಾರ್ವಜನಿಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago