ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ.
ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ
ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13 ವರ್ಷದ ದಾಂಪತ್ಯ ಜೀವನ ದಾರುಣ್ಯ ಅಂತ್ಯ ಕಂಡಿತ್ತು. ಇದಕ್ಕೆ ಅವರ ಸಹೋದರನೇ ನೇರ ಕಾರಣವೆಂದು ಮೆಗ್ಗಾನ್ ಗೆ ದಾಖಲಾಗಿರುವ ರಫಿಕುಲ್ಲಾ ಆರೋಪಿಸಿದ್ದಾರೆ.
ನಾಲ್ಕು ಜನ ಮಕ್ಕಳನ್ನೂ ರಫಿಕುಲ್ಲಾ ಸಾಕುತ್ತಿದ್ದು ಗ್ರಾಮದಲ್ಲಿ ಒಳ್ಳೆಯ ಹೆಸರು ಪಡೆದಿದ್ದರು. ಅವರ ದೊಡ್ಡಪ್ಪನ ಮಗನ ಹೇಳಿಕೆ ಪ್ರಕಾರ ನಿನ್ನೆ ಹಾರನಹಳ್ಳಿ ಪ್ರಾರ್ಥನಾ ಮಂದಿರದಲ್ಲಿ ಹಣದ ವಿಷಯವನ್ನ ಸರಿಪಡಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ನಿವಾಸಿಗಳಾದ ಸಾದಿಕ್ ಪಾಷಾ, ಇಲ್ಲು ಮತ್ತು ದಸ್ತು  ಈ ದಾಳಿ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ರಫೀಕುಲ್ಲಾ ತಿಳಿಸಿದ್ದಾರೆ ಕಾರನಲ್ಲಿ ಹಿಂಬಾಲಿಸಿಕೊಂಡು  ಐವರು ಬಂದಿದ್ದಾರೆ.  ಇವರೆಲ್ಲಾ ಆತ್ಮಹತ್ಯೆ ಮಾಡಿಕೊಂಡಿರುವ ರಿಹಾನ ಭಾನು ಅವರ ಕಡೆಯವರು ಎಂಬುದು ಅವರ ಹೇಳಿಕೆ ಆಗಿದೆ.
ಗಾಯಗೊಂಡ ರಫೀಕುಲ್ಲಾರನ್ನ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯ ಪಿಎಸ್ ಐ ನವೀನ್ ಕುಮಾರ ಮಠಪತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

3 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

5 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

6 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

6 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

6 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago