Headlines

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ :

ರಿಪ್ಪನ್ ಪೇಟೆ : ಹಾನಗಲ್ ವಿಧಾನಸಬೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ  ಜಯಭೇರಿ ಬಾರಿಸಿದ ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ವಿನಾಯಕ ವೃತ್ತದಲ್ಲಿ ಹೆಚ್ಚಿನ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಮಾತನಾಡಿ, ಕಾಂಗ್ರೆಸ್‌ನ ಜನಪರ ಕಾರ್ಯಗಳು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಭಾರಿ ಬಹುಮತದಿಂದ ವಿಜೇತರನ್ನಾಗಿಸಿದ ಹಾನಗಲ್ ವಿಧಾನ ಸಭಾ ಕ್ಷೇತ್ರದ ಮತದಾರರಿಗೆ ಮೊದಲು ಅಭಿನಂದನೆ ಸಲ್ಲಿಸುವೆ ಎಂದರು.

ಇದೆ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಚಂದ್ರೇಶ್ ಸಹ ಹಾನಗಲ್ ವಿಧಾನ ಸಭಾ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಮಧುಸೂದನ್ ,ಗಣಪತಿ, ಪ್ರಕಾಶ್ ಪಾಲೇಕರ್,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್,ಕಟ್ಟೆ ಪ್ರವೀಣ್,ಜಿ ಕೆ ಗೋಪಾಲಕೃಷ್ಣ, ರಾಕೇಶ್,ಮೊಯಿದ್ದೀನ್,ಮಾಲತೇಶ್ ಹಾಗೂ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *