ರಿಪ್ಪನ್ ಪೇಟೆ : ಹಾನಗಲ್ ವಿಧಾನಸಬೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಜಯಭೇರಿ ಬಾರಿಸಿದ ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ವಿನಾಯಕ ವೃತ್ತದಲ್ಲಿ ಹೆಚ್ಚಿನ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಮಾತನಾಡಿ, ಕಾಂಗ್ರೆಸ್‌ನ ಜನಪರ ಕಾರ್ಯಗಳು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಭಾರಿ ಬಹುಮತದಿಂದ ವಿಜೇತರನ್ನಾಗಿಸಿದ ಹಾನಗಲ್ ವಿಧಾನ ಸಭಾ ಕ್ಷೇತ್ರದ ಮತದಾರರಿಗೆ ಮೊದಲು ಅಭಿನಂದನೆ ಸಲ್ಲಿಸುವೆ ಎಂದರು.
ಇದೆ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಚಂದ್ರೇಶ್ ಸಹ ಹಾನಗಲ್ ವಿಧಾನ ಸಭಾ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಮಧುಸೂದನ್ ,ಗಣಪತಿ, ಪ್ರಕಾಶ್ ಪಾಲೇಕರ್,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್,ಕಟ್ಟೆ ಪ್ರವೀಣ್,ಜಿ ಕೆ ಗೋಪಾಲಕೃಷ್ಣ, ರಾಕೇಶ್,ಮೊಯಿದ್ದೀನ್,ಮಾಲತೇಶ್ ಹಾಗೂ ಇನ್ನಿತರರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್