ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :
ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ.