Headlines

ತೀರ್ಥಹಳ್ಳಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರ ಬಂಧನ :

ತೀರ್ಥಹಳ್ಳಿ: ಮಾರಿಕಾಂಬ ದೇವಸ್ಥಾನದ ಎಡಭಾಗದ ಓಣಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು ಇಬ್ಬರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಕುಶಾವತಿಯ ಅನುಜಿತ್ ಮತ್ತು ಬೆಟ್ಟಮಕ್ಕಿಯ ಸುಮಂತ್ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ತೀರ್ಥಹಳ್ಳಿ ಪೊಲೀಸರು ಗಸ್ತು ತಿರುಗುವಾಗ ಅನುಜಿತ್, ಸುಮಂತ್ ಮತ್ತು ಸೊಪ್ಪುಗುಡ್ಡೆಯ ಮಂಜುನಾಥ ಅನುಚಿತವಾಗಿ ವರ್ತಿಸುತ್ತಿದ್ದರು. ಮೂವರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು ಇಬ್ಬರದ್ದು ಪಾಸಿಟಿವ್ ಬಂದಿದೆ.  ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಪುನರಾಯ್ಕೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಹುಟ್ಟಿಸಿದೆ : ಆರ್ ಎನ್ ಮಂಜುನಾಥ್

ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್   ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ.  ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್  ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು…

Read More

ಕುಸಿದು ಬಿದ್ದ ಮನೆ ಗೋಡೆ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ಸದಸ್ಯರು!!!!

ಶಿವಮೊಗ್ಗ, ನ.20: ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ, ಶಿವಮೊಗ್ಗ ತಾಲೂಕು ಕೂಡಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಪಾರ್ವತಮ್ಮ ಎಂಬುವವರ ಮನೆಯೇ ಕುಸಿದು ಬಿದ್ದಿದ್ದಾಗಿದೆ. ಮುಂಜಾನೆ ಸವಿ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರು, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾದ ಸುನಿಲ್ ಹಾಗೂ ವಿಜಯ್ ಭೇಟಿ ನೀಡಿ ಪರಿಶೀಲಿಸಿದರು. ‘ಸ್ಥಳಕ್ಕೆ ಇಲ್ಲಿಯವರೆಗೂ ಯಾವುದೆ ಅಧಿಕಾರಿ – ಸಿಬ್ಬಂದಿ ಭೇಟಿ ನೀಡಿಲ್ಲ. ಕುಟುಂಬಕ್ಕೆ ಗ್ರಾಮದ…

Read More

ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :

ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ …

Read More

ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್​ಕುಮಾರ್​ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ…

Read More

ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.  ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…

Read More

ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ರಿಪ್ಪನ್ ಪೇಟೆಯಲ್ಲಿ ಇದೇ 27 ಕ್ಕೆ ಅದ್ದೂರಿ ಕನ್ನಡ ರಾಜ್ಯೋತ್ಸವ : ಪದ್ಮಶ್ರಿ ಪುರಸ್ಕೃತ ಹರೇಕಾಳ ಹಾಜಬ್ಬ ಹಾಗೂ ಮಂಜಮ್ಮ ಜೋಗತಿಗೆ ಸನ್ಮಾನ ಕಾರ್ಯಕ್ರಮ

ರಿಪ್ಪನ್ ಪೇಟೆ : ನವೆಂಬರ್ 27 ರ ಶನಿವಾರ ರಿಪ್ಪನ್ ಪೇಟೆಯಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ದಿಂದ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆರ್ ಎ ಚಾಬುಸಾಬ್ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು. ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಕುವೆಂಪು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವಂಬರ್ 27 ರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

Read More

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್

ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….

Read More