ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ:ನ್ಯಾಯಧೀಶ ಕೆ ರವಿಕುಮಾರ್.
ರಿಪ್ಪನ್ ಪೇಟೆ : ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ ಮಾಡದಿದ್ದರೆ ಪ್ರಾಕೃತಿಕ ವಿಕೋಪಗಳು.ಭೂಕುಸಿತಗಳು ಉಂಟಾಗುತ್ತವೆ ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಅರಣ್ಯ ಸಂರಕ್ಷಣೆಗೆ ಮುಂದಾಗಬೇಕೆಂದು ಹೊಸನಗರ ತಾಲೂಕ್ ಪ್ರಧಾನ ವ್ಯವಹಾರ ನ್ಯಾಯಧೀಶ ಮತ್ತು ಪ್ರಾಧಿಕಾರದ ಸದಸ್ಯ ಕೆ.ರವಿಕುಮಾರ್ ಹೇಳಿದರು. ಅಮೃತ ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಗ್ರಾಮಆಡಳಿತ ಅಮೃತ ಹಾಗೂ ಅಮೃತ ಸರಕಾರಿ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ…