Headlines

ತೀರ್ಥಹಳ್ಳಿ ದನಗಳ್ಳರ ಹಿಟ್ & ರನ್ ನಿಂದ ಇಬ್ಬರು ಯುವಕರಿಗೆ ಗಂಭೀರ ಗಾಯ!! ಆಸ್ಪತ್ರೆಗೆ ಆಗಮಿಸಿದ ಗೃಹಸಚಿವ ಆರಗ ಜ್ಞಾನೇಂದ್ರ:

ತೀರ್ಥಹಳ್ಳಿ: ಮಲೆನಾಡ ಭಾಗದಲ್ಲಿ ದನಗಳ್ಳರ ಹಾವಳಿ ಮಿತಿ ಮೀರಿದ್ದು ಅದರಲ್ಲೂ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜೆಲ್ಲೆಯಲ್ಲಿ ದನ ಕಳ್ಳರ ಕೇಸ್ ದಾಖಲಾಗುತ್ತಲೇ ಇರುತ್ತಿದೆ. 

ತೀರ್ಥಹಳ್ಳಿಯ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ಕಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವಾಹನವನ್ನು ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ತಾಲೂಕಿನ ಮೇಳಿಗೆಯಿಂದ  ಅಪ್ ವಾಹನವನ್ನು ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಅಪ್ ಹತ್ತಿಸಲಾಗಿದೆ. 
ಕಿರಣ್(23), ಚರಣ್(24) ಎಂಬ ಯುವಕರ ಮೇಲೆ ಪಿಕ್ ಅಪ್ ವಾಹನ ಹತ್ತಿಸಿದ್ದು ಇಬ್ಬರು ಸಹ ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ತೀರ್ಥಹಳ್ಳಿ ಆಸ್ಪತ್ರೆಗೆ ಗೃಹಸಚಿವರ ಭೇಟಿ : 

ವಿಷಯ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇಬ್ಬರು ಯುವಕರ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. 

ದನ ಕಳ್ಳತನ ಮಾಡಿದ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗೃಹ ಸಚಿವರು ಹೇಳಿದರು.

Leave a Reply

Your email address will not be published. Required fields are marked *