Headlines

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಪ್ರಚಾರ ನಡೆಸುತ್ತೇವೆ ಎಂದರು.

ಬಳಿಕ ಸಂಸದ ಬಿ.ವೈ.ರಾಘವೇಂದ್ರರವರು ಮಾತನಾಡಿ, ಪಕ್ಷ ಒಮ್ಮತದಿಂದ ಅರುಣ್ ಅವರನ್ನು ಕಣಕ್ಕೆ ಇಳಿಸಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಶೇ. 50ರಷ್ಟಿದ್ದಾರೆ. ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಲಾಗಿದೆ. ಹೀಗಾಗಿ, ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮೊದಲ ಸುತ್ತಿನಲ್ಲಿಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *