w
Headlines
Home » ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ.
ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ ಹೊನಗೋಡು ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಭರ್ಜರಿಯಾಗಿ ಚಾಲನೆ ನೀಡಲಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ಹೊನಗೋಡು ಅವರು ನಮ್ಮ ಜಿಲ್ಲೆಯಲ್ಲಿ 2ಲಕ್ಷ ಹೊಸ ಸದಸ್ಯತ್ವ ಅಭಿಯಾನ ಹೊಂದುವಂತಹ ಗುರಿ ಹೊಂದಿದ್ದೇವೆ ಸದ್ಯದಲ್ಲಿ ಆ ಗುರಿಯನ್ನು ತಲುಪಿ ತಲುಪಿಯೇ ತೀರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಇದೀಗ ಸಂಪೂರ್ಣ ವಿಫಲವಾಗಿದ್ದು ಮುಂದಿನ ಬರುವ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಮತ್ತೆ ಕೆಲಸ ನಿರ್ವಹಿಸುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ  ಕಾರ್ಯದರ್ಶಿ ಚಂದ್ರ ಭೂಪಾಲ್.ಪಂಚಾಯಿತಿ ಸದಸ್ಯರಾದ ಲಲಿತಮ್ಮ ಹಾಗೂ ಕೆರಿಯಮ್ಮ.ಗಜೇಂದ್ರ  ಹಾಜರಿದ್ದರು.
ವರದಿ: ಪವನ್ ಕುಮಾರ್ ಕಠಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.