ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ.
ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್ ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ ಹೊನಗೋಡು ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಭರ್ಜರಿಯಾಗಿ ಚಾಲನೆ ನೀಡಲಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ಹೊನಗೋಡು ಅವರು ನಮ್ಮ ಜಿಲ್ಲೆಯಲ್ಲಿ 2ಲಕ್ಷ ಹೊಸ ಸದಸ್ಯತ್ವ ಅಭಿಯಾನ ಹೊಂದುವಂತಹ ಗುರಿ ಹೊಂದಿದ್ದೇವೆ ಸದ್ಯದಲ್ಲಿ ಆ ಗುರಿಯನ್ನು ತಲುಪಿ ತಲುಪಿಯೇ ತೀರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಇದೀಗ ಸಂಪೂರ್ಣ ವಿಫಲವಾಗಿದ್ದು ಮುಂದಿನ ಬರುವ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಮತ್ತೆ ಕೆಲಸ ನಿರ್ವಹಿಸುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರ ಭೂಪಾಲ್.ಪಂಚಾಯಿತಿ ಸದಸ್ಯರಾದ ಲಲಿತಮ್ಮ ಹಾಗೂ ಕೆರಿಯಮ್ಮ.ಗಜೇಂದ್ರ ಹಾಜರಿದ್ದರು.
ವರದಿ: ಪವನ್ ಕುಮಾರ್ ಕಠಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್