ರಿಪ್ಪನ್ ಪೇಟೆ : ಕಳೆದ ಎರಡು ತಿಂಗಳ ಹಿಂದೆ ರಿಪ್ಪನ್ ಪೇಟೆ ಪಟ್ಟಣದ ಮೇರಿ ಮಾತಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಭರತ್ ಬೆಳ್ಳಿ (14)ಎಂಬ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲುಜಾರಿ ತಮ್ಮ ಮನೆಯ ಸಮೀಪದಲ್ಲಿರುವ ಹಳ್ಳಕ್ಕೆ ಬಿದ್ದು ಮೃತನಾಗಿದ್ದ.
ಮೃತನ ತಂದೆ ವಾಸು ರವರು ರಿಪ್ಪನ್ ಪೇಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುಟುಂಬಕ್ಕೆ ಹೊಸನಗರ ತಾಲೂಕು ಆರ್ಯ ಈಡಿಗ ನೌಕರರ ಕ್ರಿಯಾ ವೇದಿಕೆಯ ವತಿಯಿಂದ 31 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದರು.
ಈ ಸಂದರ್ಭದಲ್ಲಿ ಹೊಸನಗರ ತಾಲೂಕು ಆರ್ಯ ಈಡಿಗ ನೌಕರರ ವೇದಿಕೆಯ ಅದ್ಯಕ್ಷ ಗುರುಮೂರ್ತಿ ಕಾರ್ಯದರ್ಶಿ ಲಕ್ಷ್ಮಣ ಹಾರಂಬಳ್ಳಿ, ಗೌ ಅದ್ಯಕ್ಷ ಹಾಲಪ್ಪಸಂಕೂರ್, ನಿರ್ದೇಶಕ ರಾದ ಸೋಮಶೇಖರ್ ಬಂಡಿ ನಾಗರಾಜ ಎರೆಬೀಸ್
ಬೋಜಪ್ಪ, ಸುರೇಶ್ ತುಪ್ಪೂರು.ಪ್ರದೀಪ್,ಪುಟ್ಟಸ್ವಾಮಿ ಕತ್ರಿಕೊಪ್ಪ, ಗಂಗಾಧರ ಇಟ್ಟಕ್ಕಿ ಹಾಜರಿದ್ದರು.
ವರದಿ : ಎಸ್ ಎಂ ಆರ್
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್