ಆಲುವಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಾಲಿಬಾಲ್ ಪಂದ್ಯಾವಳಿ : ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ : ವೀರೇಶ್ ಆಲುವಳ್ಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ ಎಂದು ಈ ಸಂಧರ್ಭದಲ್ಲಿ ಭರವಸೆ ನೀಡಿದರು.
ನಂತರ ಮಾತನಾಡಿದ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ಼್ ಮೊಬೈಲ್ ಮತ್ತು ಟಿವಿ ಮಾಧ್ಯಮದ
ಪ್ರಭಾವದಿಂದ ಕ್ರೀಡೆಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಆಲುವಳ್ಳಿಯ ಸಿದ್ದಿ ವಿನಾಯಕ ಗೆಳೆಯರ ಬಳಗ ಹಾಗೂ ಊರ ನಾಗರಿಕರು ಪಂದ್ಯಾವಳಿಯನ್ನು ಆಯೋಜಿಸಿ ಅಭಿವೃದ್ಧಿ ಮತ್ತು ಸಂಬಂಧದ ಬೆಸುಗೆಗೆ ಮುನ್ನುಡಿ ಬರೆಯುತ್ತಿರುವದು ಮಾದರಿಯಾಗಿದೆ ಎಂದರು.
ರಾಜ್ಯದ ಅನೇಕ ಭಾಗಗಳಿಂದ ಹಲವಾರು ಪ್ರತಿಭಾನ್ವಿತ ತಂಡಗಳು ಆಗಮಿಸಿದ್ದವು ಈ ಪಂದ್ಯಾವಳಿಯಲ್ಲಿ ಪ್ರಥಮ ಪ್ರಶಸ್ತಿಯನ್ನು ಶಿವಮೊಗ್ಗದ ಯುನೈಟೆಡ್ ತಂಡವು ತನ್ನದಾಗಿಸಿಕೊಂಡರೆ ದ್ವಿತೀಯ ಸ್ಥಾನವನ್ನು ಗರ್ತಿಕೆರೆಯ ಅಮೃತ ವಾಲಿಬಾಲ್ ತಂಡ ತನ್ನದಾಗಿಸಿಕೊಂಡಿತು.ಇನ್ನುಳಿದಂತೆ ಮೂರನೇ ಸ್ಥಾನ ಮಾದಾಪುರ ತಂಡ ಹಾಗೂ ನಾಲ್ಕನೇ ಸ್ಥಾನವನ್ನು ಉಡುಪಿ ತಂಡದ ಪಾಲಾಯಿತು.

ಈ ಸಂಧರ್ಭದಲ್ಲಿ ಮುಖಂಡರಾದ ಈಶ್ವರಪ್ಪ ಗೌಡ ,ರಾಜೇಶ್ ಜೈನ್,ಸಿದ್ದಿ ವಿನಾಯಕ ಗೆಳೆಯರ ಬಳಗ ಆಲುವಳ್ಳಿ ಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಊರಿನ ಹಿರಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *