ಭಾಷೆ ನೆಪದಲ್ಲಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಕೃತ್ಯ ಖಂಡಿಸಿ ವಿಧಾನಸಭೆಯಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಎಂಇಎಸ್ ವಿರುದ್ಧ ಸರ್ವಾನುಮತದ ಖಂಡನಾ ನಿರ್ಣಯ ಕೂಡ ಅಂಗೀಕರಿಸಲಾಗಿದೆ.
ಸುವರ್ಣ ಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಣಿ ಚೆನ್ನಮ್ಮನ ಪ್ರತಿಮೆ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಎಂಇಎಸ್ ಬ್ಯಾನ್ ಮಾಡಲು ಆಗದಿದ್ದರೂ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.