ಕಚ್ಚಿಗೆಬೈಲು ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ :

ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್‌ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ ಗ್ರಾಮದವರೆಗೂ   ಎತ್ತಿನಗಾಡಿ ಹಾಗೂ ಟ್ರಾಕ್ಟರ್ ಗಳ ಮೂಲಕ ಪುನೀತ್ ರಾಜ್‌ಕುಮಾರ್ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.

ಈ ಸಂಧರ್ಭದಲ್ಲಿ ನಾಮಫಲಕ ಉದ್ಘಾಟಿಸಿದ ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಸ್ವಾಮಿಗಳಾದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು ನಂತರ ಮಾತನಾಡಿ ಹುಟ್ಟು ಬಹಳ ಸರಳ ಬದುಕು ಬಹಳ ಕಠಿಣ. ಬದುಕಿನ ಆದರ್ಶಗಳನ್ನು ಪಾಲಿಸುವುದು ಮಾನವನ ಕರ್ತವ್ಯ, ಮಾನವ ಜನ್ಮದಲ್ಲಿ ಬದುಕುವುದು ಅದೃಷ್ಟವೇ ಹೌದು. ಹೇಗಾದರೂ ಬದುಕಿದರೆ ಆಯಿತು. ಎಂಬುದಕ್ಕಿಂತ ಹೇಗೆ ಬದುಕಿದ್ದೇವೆ ಎಂಬುದು ಮುಖ್ಯವಾಗುತ್ತದೆ. ಪುನೀತ್ ರಾಜಕುಮಾರ್ ಆದರ್ಶಗಳನ್ನು ಪ್ರತಿಯೊಬ್ಬ ನಾಗರಿಕನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಪುನೀತ್ ರಾಜಕುಮಾರ್ ಇರುವಾಗ ಅವರು ಮಾಡಿದ ಸಮಾಜಮುಖೀ ಕಾರ್ಯಗಳು, ಸಹಾಯಗಳು,ಆದರ್ಶಗಳು ಗುಣಗಳು ಅವರ ಮರಣದ ನಂತರ ಸಮಾಜಕ್ಕೆ ತಿಳಿಯುತ್ತೇವೆ. ಪುನೀತ್ ರಾಜಕುಮಾರ್ ರಂತೆಯೇ ಬದುಕಿ ಸಮಾಜ ಮುಖಿ ಕಾರ್ಯಗಳನ್ನು ಮಾಡೋಣ ಎಂದರು.
ನಂತರ ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದ ಮಾರುತಿಪುರ ಗ್ರಾಪಂ ಸದಸ್ಯರಾದ ಅವಿನಾಶ್ ಎಸ್ ಜೆ ಮಾತನಾಡಿ ಪುನೀತ್ ರಾಜ್‍ಕುಮಾರ್ ರವರು ‘ಯಾರಿಗೂ ತಿಳಿಯದ ಹಾಗೇ ಅವರು ಮಾಡಿರುವ ಸಮಾಜ ಸೇವೆ ನಿಜಕ್ಕೂ ಅವಿಸ್ಮರಣೀಯ. ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಾಮಾನ್ಯರಾದ ನಾವು ಅವರ ಜೀವನ ತತ್ವವನ್ನು ಅಳವಡಿಸಿಕೊಳ್ಳಬೇಕಾಗಿದೆ. ಸಣ್ಣ ವಯಸ್ಸಿನಲ್ಲಿಯೇ ಆಕಾಶದೆತ್ತರಕ್ಕೆ ಬೆಳೆದಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪುನೀತ್ ಅವರನ್ನು ಜೀವಂತವಾಗಿರಿಸಲು ಪ್ರಯತ್ನಿಸಬೇಕು’ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಚಿನ್ನಪ್ಪ,ಪ್ರಕಾಶ್ ಗುಬ್ಬಿಗ ,ಜಯಪ್ಪ ಸಂಪಳ್ಳಿ ,ರಾಜು ಎಸ್ ಕೆ ,ಯೋಗೆಂದ್ರಪ್ಪ,ಸುಮಾ ಸುರೇಶ್,ಜಗದೀಶ್ ಹಾಗೂ ಊರಿನ ಹಿರಿಯರು ಗ್ರಾಮಸ್ಥರೆಲ್ಲಾ ಉಪಸ್ಥಿತರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

3 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

6 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

6 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

7 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

14 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

15 hours ago