ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ. ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯವೆನ್ನುವುದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು ಎಂದರು.
ನಂತರ ಮಾತನಾಡಿದ ಆರ್ ಎನ್ ಮಂಜುನಾಥ್ ಎಂಇಎಸ್ ಮುಖಂಡರನ್ನು ಕೂಡಲೇ ಗಡಿಪಾರು ಮಾಡಬೇಕು,ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಅರಿವಿದ್ದರೂ ಸಹ ಪದೇಪದೇ ಕ್ಯಾತೆ ತೆಗೆಯುತ್ತಿದ್ದಾರೆ ಇಂಥವರಿಗೆ ಹಲವಾರು ಬಾರಿ ತಕ್ಕ ಉತ್ತರ ನೀಡಿದರೂ ಅವರು ಬುದ್ಧಿ ಕಲಿತಿಲ್ಲ ಬೆಳಗಾವಿಯಲ್ಲಿ ಎಂಇಎಸ್ ನವರು ಕನ್ನಡ ಬಾವುಟವನ್ನು ಸುಡುವ ಮೂಲಕ ಮತ್ತೆ ಪುಂಡಾಟಿಕೆ ಮಾಡಿದ್ದಾರೆ ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಮೌನ ವಹಿಸಿರುವುದು ಖಂಡನೀಯ. ಸರಕಾರಕ್ಕೆ ನಿಜವಾಗಿಯೂ ಕನ್ನಡದ ಬಗ್ಗೆ ಕಾಳಜಿ ಇದ್ದರೆ ತಾಯಿ ಸಮಾನವಾದ ನಮ್ಮ ಕನ್ನಡ ಬಾವುಟವನ್ನು ಸುಟ್ಟಿರುವ ಇಂಥವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಬೇಕು ಎಂದರು.
ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾಸಾಬ್ ಮಾತನಾಡಿ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಒಂದು ವೇಳೆ; ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.
ವಿನಾಯಕ ವೃತ್ತದಲ್ಲಿ ಎಂಇಎಸ್ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಬಳಿಕ ಮೆರವಣಿಗೆ ಮೂಲಕ ತೆರಳಿ ನಾಡಕಛೇರಿಯಲ್ಲಿ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘಟನೆಯ ಎಂ ಎಂ ಪರಮೇಶ್,ಎನ್ ವರ್ತೇಶ್ ,ಹಸನಬ್ಬ,ಶ್ರೀಧರ್ ,ರಮೇಶ್ ಫ಼್ಯಾನ್ಸಿ, ಧನಲಕ್ಷ್ಮಿ , ಸುಗಂಧರಾಜ್,ಪ್ರಕಾಶ್ ಪಾಲೇಕರ್,ಆರ್ ಹೆಚ್ ಮೈದೀನ್,ಆರ್ ಎ ಸುಲೇಮಾನ್, ಕನ್ನಡಪರ ಹೋರಾಟಗಾರ ನಿರಂಜನ್ ಹಾಗೂ  ಇನ್ನಿತರರು‌ ಪಾಲ್ಗೊಂಡಿದ್ದರು.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

3 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

3 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

3 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

8 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

8 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

8 hours ago