January 11, 2026

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು.

ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು
ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ  ಜಗಜ್ಯೋತಿ ಬಸವಣ್ಣನವರ ಪುತ್ಥಳಿಕೆಗೆ ಮಸಿ ಬಳೆದಿದ್ದಾರೆ. ಸಂಗೋಳ್ಳಿ ರಾಯಣ್ಣನವರ ಪ್ರತಿಮೆಯನ್ನು ನಾಶ ಮಾಡಿದ್ದಾರೆ ಶಿವಾಜಿಯವರ ಪುತ್ಥಳಿಗೆ ಮುಖಕ್ಕೆ ಮಸಿ ಬಳಿಯಲಾಗಿದ್ದು ಇಂತಹ ಸಮಾಜಘಾತುಕರನ್ನು ಪೊಲೀಸ್ ಇಲಾಖೆ ಹೆಡೆಮುರಿ ಕಟ್ಟುವುದರ ಜೊತೆಗೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.

ಬಸವಣ್ಣ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ವಿಶ್ವ ಗುರುವಾಗಿದ್ದಾರೆ. ದೇಶ ವಿದೇಶಗಳಲ್ಲೂ ಬಸವಣ್ಣನವರನ್ನು ಗೌರವಿಸುತ್ತಾರೆ ಆದರೆ ಕರ್ನಾಟಕದಲ್ಲಿ ಕೆಲ ಕಿಡಿಗೇಡಿಗಳು ಅವರ ಪುತ್ಥಳಿಗೆ ಮಸಿ ಬಳಿದಂತಹ ಸಂಗತಿ ದುರಂತದ ಘಟನೆಯಾಗಿದೆ ಎಂದು ಈ ಸಂಧರ್ಭದಲ್ಲಿ ವಿಷಾದ ವ್ಯಕ್ತಪಡಿಸಿದರು.

About The Author

Leave a Reply

Your email address will not be published. Required fields are marked *

Exit mobile version