ಜಾತಿ ಪದ್ದತಿಯನ್ನು ವಿನಾಶಗೊಳಿಸಬೇಕು : ಡಾ.ಸತೀಶಕುಮಾರ ಹೊಸಮನಿ

ಶಿವಮೊಗ್ಗ : ವರ್ಣಾಶ್ರಮವನ್ನು ತಿದ್ದುವುದಲ್ಲ. ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಎಲ್ಲಾ ದೇಶಗಳಲ್ಲಿ ಮತ್ತು ಎಲ್ಲಾ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ನುಡಿದರು.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ, ಕವಿಶೈಲದ ಹೆಮಾಂಗಣ ಸಭಾಂಗಣದಲ್ಲಿ  ಡಿ. 19 ರ ಭಾನುವಾರ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ಇವರು ಹಮ್ಮಿಕೊಂಡಿದ್ದ ಕುವೆಂಪುರವರ ಕನ್ನಡ ಡಿಂಡಿಮವ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುವೆಂಪುರವರು ಸಪ್ತಸೂತ್ರಗಳಲ್ಲಿ ಉಲ್ಲೇಖಿಸಿರುವಂತೆ “ಮನುಷ್ಯಜಾತಿ ತಾನೊಂದೇ ವಲಂ” ಎಂಬುವುದನ್ನು ನಿರೂಪಾಧಿಕವಾಗಿ ಸ್ವೀಕರಿಸಬೇಕು. ಜಾತಿ ಮತ ತೊಲಗಿ ಆಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು. ಮತ ‘ಮನುಜಮತ’ ವಾಗಬೇಕು, ಪಥ ‘ವಿಶ್ವಪಥ’ ವಾಗಬೇಕು; ಮನುಷ್ಯ ‘ವಿಶ್ವಮಾನವ’ ನಾಗಬೇಕು.ಇಂದಿನ ಮಕ್ಕಳೇ ನಾಳಿನ ದೇಶದ ಭವಿಷ್ಯ ಅದರಲ್ಲೂ ಲಭ್ಯವಿರುವ ತಂತ್ರಜ್ಞಾನದ ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು  ಅಭಿಪ್ರಾಯಪಟ್ಟರು. 
ನಮ್ಮ ಕರ್ನಾಟಕ ಸಾರ್ವಜನಿಕ ಗ್ರಂಥಾಲಯದ ಡಿಜಿಟಲ್ ಗ್ರಂಥಾಲಯ ವೆಬ್‍ಸೈಟನ್ನು ಸುಮಾರು 55 ಕೋಟಿ ಜನರು ವೀಕ್ಷಣೆ ಮಾಡಿದ್ದಾರೆ. ಸಾರ್ವಜನಿಕ ಗ್ರಂಥಾಲಯದ ಡಿಜಿಟಲ್ ಪೋರ್ಟಲ್‍ನÀಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗುವ ಪುಸ್ತಕಗಳು, ಕಥೆ, ಕಾದಂಬರಿ, ಮಕ್ಕಳ ಪುಸ್ತಕಗಳು, ದಿನಪತ್ರಿಕೆ ಮತ್ತು ವೀಡಿಯೋಗಳು ಈ ರೀತಿಯಾಗಿ ಎಲ್ಲಾ ರೀತಿಯ ವಿಷಯವಸ್ತುಗಳ ಸಾಹಿತ್ಯವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

 ಭಾರತ ದೇಶದಲ್ಲಿ ಪ್ರಪ್ರಥಮವಾಗಿ ಡಿಜಿಟಲ್ ಗ್ರಂಥಾಲಯ ಹಾಗೂ ಮೊಬೈಲ್  ಆ್ಯಪ್‍ನಲ್ಲಿ ಒಟ್ಟು 2,12,00,000 (2 ಕೋಟಿ 12 ಲಕ್ಷ ಓದುಗರು) ಸದಸ್ಯರು ನೋಂದಣಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5,55,469 ಓದುಗರು ನೋಂದಣಿಯಾಗಿದ್ದು, ಇನ್ನೂ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವಂತೆ ತಿಳಿಸಿದರು.

 ಈ ಸಂದರ್ಭದಲ್ಲಿ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ಇವರ ವತಿಯಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ|| ಸತೀಶಕುಮಾರ ಎಸ್ ಹೊಸಮನಿ ರವರಿಗೆ “ಕರುನಾಡ ನಕ್ಷತ್ರ” ಪ್ರಶಸ್ತಿ ಹಾಗೂ  ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ವಿತರಿಸಲಾಯಿತು.
ಇದೇ ಸಂಧರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ ರವರಿಗೆ ಸನ್ಮಾನಿಸಲಾಯಿತು.

ಈ ವೇಳೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್. ಉಮೇಶ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ವೆಂಕಟೇಶ್.ಸಿ.ಜೆ, ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳಾದ ಹರೀಶ್. ಎಂ.ಆರ್, ಈ. ರವೀಶ್, ಕಡಿದಾಳ್ ಪ್ರಕಾಶ್, ವೀಣಾ ಗಾನವಿ ರೈತಕವಿ ಪಿ ಶಂಕರಪ್ಪ ಬಳ್ಳೇಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *