ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ.
ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಬಳಸಗೋಡು ಗ್ರಾಮದ ಪಶಾಂತ್ ಮತ್ತು ಗಾಮಪ್ಪ ಎಂಬ ಇಬ್ಬರನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್ ,ಬಸವರಾಜ್, ಲೊಕೇಶ್ ಕುಮಾರ್ ಪಾಲ್ಗೊಂಡಿದ್ದರು.