ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ

ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಐದು ದಿನಗಳ ಹಿಂದೆ  ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ  ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು.
ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿ ಘಟನೆಯನ್ನು   ಖಂಡಿಸಿದ್ದವು ಹಾಗೂ ತಪ್ಪಿತಸ್ಥರ ವಿರುದ್ದ ತಲೆದಂಡ ಆಗಬೇಕೆಂದು ಆಗ್ರಹಿಸಿದ್ದರು.
ಇಲಾಖೆಯ ಮೇಲೆ ಸಾರ್ವಜನಿಕರಿಂದ ಹಾಗೂ ಗೃಹಸಚಿವರಿಂದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ತೀವ್ರ ಒತ್ತಡವಿತ್ತು. ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ಆಶ್ವಾಸನೆ ನೀಡಿದ್ದರು. ಅಂತೆಯೇ ಇಂದು ಶಿವಮೊಗ್ಗದ ಟಿಪ್ಪು ನಗರ ನಿವಾಸಿ ಅಪ್ರೋಜ್ ಹಾಗೂ ಇರ್ಫಾನ್ ಎಂಬ ಇಬ್ಬರು ಆರೋಪಿಗಳನ್ನು ಹಾಗೂ ಅವರ ಬಳಿಯಿದ್ದ ಸ್ಯಾಂಟ್ರೋ ಕಾರನ್ನು ಮಾಳೂರು ಸಬ್ ಇನ್ಸ್ಪೆಕ್ಟರ್ ಜಯಪ್ಪ ನಾಯಕ ಅವರ ನೇತೃತ್ವದಲ್ಲಿ ಪೊಲೀಸರು ವಶ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

3 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

3 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

4 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

4 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

12 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

12 hours ago