ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ತೀರ್ಥಹಳ್ಳಿಯ ಯುವ ಸಾಹಿತಿ ಹಾಗೂ ಪತ್ರಕರ್ತ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವು ಹಾಗೂ ಮುಖ್ಯ ಅತಿಥಿಗಳಾದ ನಾಗರತ್ನಮ್ಮ,ಹುಲಿಯೂರುದುರ್ಗ ಲಕ್ಷೀ ನಾರಾಯಣ್,ಡಾ ಶಿವರಾಜ್ ಗೌಡ, ಹೆಚ್ ಆರ್ ಅರವಿಂದ್,ಗುರುಪ್ರಸಾದ್ ಹಾಗೂ ಇನ್ನಿತರರು ಇದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ಸು 3000 ಸಾವಿರ ಕವನ, ಕವಿತೆ, ಟಂಕ,ರುಬಾಯಿ ಹೀಗೆ ಸಾಹಿತ್ಯದ ಹಲವಾರು ಪ್ರಕಾರಗಳನ್ನು ಬರೆದಿರುವ ಯುವ ಸಾಹಿತಿ ಹಾಗೂ ಪತ್ರಕರ್ತರಾದ ಅರುಣ್ ಮಂಜುನಾಥ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಅವರ ಮಾರ್ಗದರ್ಶಕರು ಅದ ಯುವ ನಾಯಕ ಕಟ್ಟೆ ಪ್ರವೀಣ್ ಅಭಿನಂದನೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ ಯುವ ಕವಯತ್ರಿ ರಶ್ಮಿ ಸನಿಲ್ ರವರು ಈ ವರ್ಷದಲ್ಲಿ ಸತತವಾಗಿ ಮೂರನೇ ರಾಜ್ಯ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.ಇವರಿಗೆ ಗುರುಕುಲ ಕಲಾ ಪ್ರತಿಷ್ಠಾನದ ಶಿವಮೊಗ್ಗ ಜಿಲ್ಲೆಯ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ,ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಸುಜಾತ ಕೊಣೂರು ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್