ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು.

ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವು ಸೂಡೂರು ಪುನೀತ್ ರಾಜ್‍ಕುಮಾರ್ ರವರು ‘ಯಾರಿಗೂ ತಿಳಿಯದ ಹಾಗೇ ಅವರು ಮಾಡಿರುವ ಸಮಾಜ ಸೇವೆ ನಿಜಕ್ಕೂ ಅವಿಸ್ಮರಣೀಯ. ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಾಮಾನ್ಯರಾದ ನಾವು ಅವರ ಜೀವನ ತತ್ವವನ್ನು ಅಳವಡಿಸಿಕೊಳ್ಳಬೇಕಾಗಿದೆ. ಸಣ್ಣ ವಯಸ್ಸಿನಲ್ಲಿಯೇ ಆಕಾಶದೆತ್ತರಕ್ಕೆ ಬೆಳೆದಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪುನೀತ್ ಅವರನ್ನು ಜೀವಂತವಾಗಿರಿಸಲು ಪ್ರಯತ್ನಿಸಬೇಕು’ ಅದನ್ನು ಹೊರತುಪಡಿಸಿ ಅವರಲ್ಲಿ ಜಾತಿಯನ್ನು ಹುಡುಕಿ ಅವರ ನಾಮಫಲಕಕ್ಕೆ ಬಣ್ಣ ಬಳಿಯುವುದು ಹೇಡಿತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು  ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಹೊಸನಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಉಲ್ಲಾಸ್,ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ,ಬುಕ್ಕಿವರೆ ಮಹೇಂದ್ರ,ಮಂಜಣ್ಣ ಮಂಡಘಟ್ಟ , ಪ್ರವೀಣ್ ಲಕ್ಷ್ಮಿಕಾಂತ್ ,ವಿನಾಯಕ ಶೆಟ್ಟಿ,ಪಿಯೂಸ್ ರೋಡ್ರಿಗಸ್,ಶ್ರೀಧರ್,ರಾಘವೇಂದ್ರ,ಅರುಣ್ ಆನಂದಪುರ,ಪ್ರವೀಣ್, ಮೇಘರಾಜ್,ಗೌತಮ್,
ವಿಜಯ್ ಈಡಿಗ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

12 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

12 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago