ರಿಪ್ಪನ್‌ಪೇಟೆಯ : ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿರುವ ಸತ್ಕಾರ್ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಕಛೇರಿಯನ್ನು ಉದ್ಘಾಟಿಸಿ ನಂತರ ಗ್ರಾಮ ಪಂಚಾಯತಿ ಸದಸ್ಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನರೇಗಾ ಮತ್ತು ಜನಜೀವನ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕಾಂಗ್ರೆಸ್ ಸರ್ಕಾರ 68 ವರ್ಷದಲ್ಲಿ ಕೇವಲ 2 ಕೋಟಿ ನಲ್ಲಿ ನೀರಿನ ಸೌಲಭ್ಯ ನೀಡಲಾಗಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ 7 ವರ್ಷಗಳಲ್ಲಿ 7 ಕೋಟಿ ನಲ್ಲಿ ನೀರಿನ ಸೌಲಭ್ಯ ಒದಗಿಸಿದೆ. ಮುಂಬರುವ ದಿನಗಳಲ್ಲಿ 20 ಕೋಟಿ ಜನರಿಗೆ ನಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಜಲಜೀವನ ಯೋಜನೆಯ ಕೀರ್ತಿ ಮೋದಿಯವರಿಗೆ ಸಲ್ಲಬೇಕು ಎಂದರು.
ನಂತರ ಶಿವಮೊಗ್ಗ ವಿಧಾನ ಪರಿಷತ್ ಬಿಜೆಪಿ ಪಕ್ಷದ ಅಭ್ಯರ್ಥಿ ಡಿ ಎಸ್ ಅರುಣ್ ಗ್ರಾಮ ಪಂಚಾಯತ್ ಸದಸ್ಯರ ಬಳಿ ಮತಯಾಚಿಸಿದರು
ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮಾತನಾಡಿ ಗ್ರಾಮ ಪಂಚಾಯತಿಗಳು ಸದೃಢವಾಗಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು ಇದರಿಂದ ಕೆಲವು ಗ್ರಾಮ ಪಂಚಾಯತಿಗಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುತ್ತಿವೆ ಇನ್ನು ಕೆಲವು ಪಂಚಾಯತಿಗಳಲ್ಲಿ ನಿರ್ಲಕ್ಷದ ದೋರಣೆಯಿಂದ ಹಿನ್ನಡೆಯಾಗಿದೆ ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈಗಾಗಲೇ ಸಾಗರ ವಿದಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 120 ಹಳ್ಳಿಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಗೆ ಹಣ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲೇ ಕಾಮಗಾರಿ ಆರಂಭಿಸುವುದಾಗಿ ಹೇಳಿದ ಅವರು ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ ರಿಪ್ಪನ್‌ಪೇಟೆ ವಿವಿಧ ಗ್ರಾಮ ಪಂಚಾಯತಿಗಳಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಯೋಜನೆ ಕುರಿತು ಸಮಿಕ್ಷೆ ನಡೆಸಲಾಗಿದ್ದು ಅದರ ಅನ್ವಯ ಸರ್ಕಾರಕ್ಕೆ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ವಿವರಿಸಿದರು ನಂತರ ಅಭ್ಯರ್ಥಿ ಡಿ ಎಸ್ ಅರುಣ್ ಪರ ಮತಯಾಚನೆ ಮಾಡಿದರು.
ಇದೇ ಸಂಧರ್ಭದಲ್ಲಿ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬಿ.ಜೆ.ಪಿ.ಜಿಲ್ಲಾ ಅಧ್ಯಕ್ಷ ಟಿ.ಡಿ.ಮೇಘರಾಜ್, ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಗಣಪತಿ ಬಿಳಗೋಡು, ಬಿ.ಜೆ.ಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ್,ಆರ್.ಟಿ.ಗೋಪಾಲ್,ಎನ್ ಆರ್ ದೇವಾನಂದ್,ಮಲ್ಲಿಕಾರ್ಜುನ, ಎನ್.ಸತೀಶ್, ಯೋಗೇಂದ್ರಗೌಡ, ಗೀರೀಶ್ ಜಂಬಳ್ಳಿ, ದೇವೇಂದ್ರಪ್ಪಗೌಡ ಹಾಗೂ ಇನ್ನಿತರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.