ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ : ಕೆ ಎಸ್ ಈಶ್ವರಪ್ಪ

ರಿಪ್ಪನ್‌ಪೇಟೆಯ : ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿರುವ ಸತ್ಕಾರ್ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಕಛೇರಿಯನ್ನು ಉದ್ಘಾಟಿಸಿ ನಂತರ ಗ್ರಾಮ ಪಂಚಾಯತಿ ಸದಸ್ಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನರೇಗಾ ಮತ್ತು ಜನಜೀವನ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕಾಂಗ್ರೆಸ್ ಸರ್ಕಾರ 68 ವರ್ಷದಲ್ಲಿ ಕೇವಲ 2 ಕೋಟಿ ನಲ್ಲಿ ನೀರಿನ ಸೌಲಭ್ಯ ನೀಡಲಾಗಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ 7 ವರ್ಷಗಳಲ್ಲಿ 7 ಕೋಟಿ ನಲ್ಲಿ ನೀರಿನ ಸೌಲಭ್ಯ ಒದಗಿಸಿದೆ. ಮುಂಬರುವ ದಿನಗಳಲ್ಲಿ 20 ಕೋಟಿ ಜನರಿಗೆ ನಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಜಲಜೀವನ ಯೋಜನೆಯ ಕೀರ್ತಿ ಮೋದಿಯವರಿಗೆ ಸಲ್ಲಬೇಕು ಎಂದರು.
ನಂತರ ಶಿವಮೊಗ್ಗ ವಿಧಾನ ಪರಿಷತ್ ಬಿಜೆಪಿ ಪಕ್ಷದ ಅಭ್ಯರ್ಥಿ ಡಿ ಎಸ್ ಅರುಣ್ ಗ್ರಾಮ ಪಂಚಾಯತ್ ಸದಸ್ಯರ ಬಳಿ ಮತಯಾಚಿಸಿದರು

ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮಾತನಾಡಿ ಗ್ರಾಮ ಪಂಚಾಯತಿಗಳು ಸದೃಢವಾಗಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು ಇದರಿಂದ ಕೆಲವು ಗ್ರಾಮ ಪಂಚಾಯತಿಗಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುತ್ತಿವೆ ಇನ್ನು ಕೆಲವು ಪಂಚಾಯತಿಗಳಲ್ಲಿ ನಿರ್ಲಕ್ಷದ ದೋರಣೆಯಿಂದ ಹಿನ್ನಡೆಯಾಗಿದೆ ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈಗಾಗಲೇ ಸಾಗರ ವಿದಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 120 ಹಳ್ಳಿಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಗೆ ಹಣ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲೇ ಕಾಮಗಾರಿ ಆರಂಭಿಸುವುದಾಗಿ ಹೇಳಿದ ಅವರು ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ ರಿಪ್ಪನ್‌ಪೇಟೆ ವಿವಿಧ ಗ್ರಾಮ ಪಂಚಾಯತಿಗಳಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಯೋಜನೆ ಕುರಿತು ಸಮಿಕ್ಷೆ ನಡೆಸಲಾಗಿದ್ದು ಅದರ ಅನ್ವಯ ಸರ್ಕಾರಕ್ಕೆ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ವಿವರಿಸಿದರು ನಂತರ ಅಭ್ಯರ್ಥಿ ಡಿ ಎಸ್ ಅರುಣ್ ಪರ ಮತಯಾಚನೆ ಮಾಡಿದರು.

ಇದೇ ಸಂಧರ್ಭದಲ್ಲಿ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬಿ.ಜೆ.ಪಿ.ಜಿಲ್ಲಾ ಅಧ್ಯಕ್ಷ ಟಿ.ಡಿ.ಮೇಘರಾಜ್, ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಗಣಪತಿ ಬಿಳಗೋಡು, ಬಿ.ಜೆ.ಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ್,ಆರ್.ಟಿ.ಗೋಪಾಲ್,ಎನ್ ಆರ್ ದೇವಾನಂದ್,ಮಲ್ಲಿಕಾರ್ಜುನ, ಎನ್.ಸತೀಶ್, ಯೋಗೇಂದ್ರಗೌಡ, ಗೀರೀಶ್ ಜಂಬಳ್ಳಿ, ದೇವೇಂದ್ರಪ್ಪಗೌಡ ಹಾಗೂ ಇನ್ನಿತರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

3 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

3 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

3 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

3 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

12 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

12 hours ago