ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ಼್ಯೂ ಜಾರಿ : ಸಚಿವ ಡಾ.ಸುಧಾಕರ್

 

ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 20 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಹೋಟೆಲ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ, ಸಭೆ ಸಮಾರಂಭ, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ. 50 ರಷ್ಟು ಮಾತ್ರ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ರಾತ್ರಿ 10 ಗಂಟೆ ನಂತರ ಸಿನಿಮಾ ಥಿಯೇಟರ್ ಬಂದ್ ಆಗಲಿದೆ.

ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ  ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ. ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುಗು, ಆರೋಗ್ಯ ಮತ್ತು  ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಉಳ್ಳವರಿಗೆ ಜನವರಿ 10ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದರು.

ಓಮೈಕ್ರಾನ್ ಸೋಂಕನ್ನು ಶೀಘ್ರವೇ ಪತ್ತೆ ಹಚ್ಚಲು ಹೊಸ ಯಂತ್ರದ ಅವಶ್ಯಕತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಆ ಉಪಕರಣ ಖರೀದಿಸಲು ಸರ್ಕಾರ ಚಿಂತಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *