ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 20 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇನ್ನೂ ಹೋಟೆಲ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ, ಸಭೆ ಸಮಾರಂಭ, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ. 50 ರಷ್ಟು ಮಾತ್ರ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ರಾತ್ರಿ 10 ಗಂಟೆ ನಂತರ ಸಿನಿಮಾ ಥಿಯೇಟರ್ ಬಂದ್ ಆಗಲಿದೆ.
ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ. ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುಗು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಉಳ್ಳವರಿಗೆ ಜನವರಿ 10ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದರು.
ಓಮೈಕ್ರಾನ್ ಸೋಂಕನ್ನು ಶೀಘ್ರವೇ ಪತ್ತೆ ಹಚ್ಚಲು ಹೊಸ ಯಂತ್ರದ ಅವಶ್ಯಕತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಆ ಉಪಕರಣ ಖರೀದಿಸಲು ಸರ್ಕಾರ ಚಿಂತಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್