ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ.
27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿರ್ದೇಶನದ ಅಡಿಯಲ್ಲಿ ಪೂರ್ಣಪ್ರಮಾಣದಲ್ಲಿ ಕೆಲಸ ಮಾಡಲು ಈ 27 ಜನ ವಕ್ತಾರರಿಗೆ ಸೂಚಿಸಿದ್ದಾರೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರರಾಗಿ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಆದರ್ಶ ಹುಂಚದ ಕಟ್ಟೆ ರವರಿಗೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ, ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್, ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್, ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್,ಕಾಂಗ್ರೆಸ್ ಮುಖಂಡರುಗಳಾದ ಅಮೀರ್ ಹಂಜಾ ಕಟ್ಟೆ ಪ್ರವೀಣ್, ಉಲ್ಲಾಸ್,ರಮೇಶ್ ಫ಼್ಯಾನ್ಸಿ ಹಾಗೂ ಇನ್ನಿತರ ಮುಖಂಡರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.