ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಅರಸಾಳು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ, ಖುಷಿ, ಉಲ್ಲಾಸಗಳಿಂದ ಆಚರಿಸಿದರು .

ಶುಕ್ರವಾರ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಗಳೊಂದಿಗೆ ಸಂಭ್ರಮದ ಕ್ರಿಸ್ಮಸ್‌ ಆಚರಣೆ ನಡೆಯಿತು. ಸಾಮೂಹಿಕ ಪ್ರಾರ್ಥನೆ, ದಿವ್ಯಬಲಿ ಪೂಜೆ ನಡೆಯುವ ಭಕ್ತಿ ಶ್ರದ್ಧೆಯ ಕೇಂದ್ರವಾದ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್‌ಗಳ ವಠಾರದಲ್ಲಿ ಸುಂದರ ಗೋದಲಿಗಳನ್ನು ರಚಿಸಿ, ಏಸುಕ್ರಿಸ್ತರ ಜನನವನ್ನು ಸಂಕೇತಿಸುವ ದೃಶ್ಯಗಳ ಮರುಸೃಷ್ಟಿಯಲ್ಲಿ ಸಂಭ್ರಮಿಸಿದರು . ಗೋದಲಿಗಳ ಮುಂದೆ ಮಕ್ಕಳು. ಹಿರಿಯರು. ಕುಟುಂಬ ವರ್ಗದವರು ಖುಷಿ ಪಡುವ, ಸೆಲ್ಫೀ ಜತೆ ಆನಂದಿಸುವ ದೃಶ್ಯಗಳು ಕಂಡು ಬಂತು.

ರಿಪ್ಪನ್ ಪೇಟೆ ಗುಡ್ ಶೇಫರ್ಡ್ ಚರ್ಚಿನ ಫಾದರ್  ಬಿನೋಯ್ ಚರ್ಚ್‌ನ ಕ್ರಿಸ್ಮಸ್‌ ಬಲಿಪೂಜೆಯಲ್ಲಿ ಭಾಗವಹಿಸಿ ಹಬ್ಬದ ಸಂದೇಶ ನೀಡಿದರು. ಕಳೆದ ಎರಡು ವರ್ಷಗಳಿಂದ ಕೊರೊನಾ ಮತ್ತಿತರ ಕಾರಣಗಳಿಂದ ಜನರು ಸಂಕಷ್ಟದಲ್ಲಿದ್ದು, ಇಂಥ ಸಂದರ್ಭದಲ್ಲಿ ಏಸು ಕ್ರಿಸ್ತರ ಪ್ರೀತಿ ಮತ್ತು ಸೇವೆಯ ಸಂದೇಶ ಹೆಚ್ಚು ಪ್ರಸ್ತುತವಾಗಬೇಕು. ಏಸು ಕ್ರಿಸ್ತರ ಸಂದೇಶ ಇಡೀ ಜಗತ್ತಿಗೆ ಬೆಳಕು ತೋರಿಸಿದೆ ಎಂದರು.

ರಾತ್ರಿ ಚರ್ಚ್‌ಗಳಲ್ಲಿ ಜರುಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಬಾಂಧವರು ಶ್ರದ್ಧೆ ಮತ್ತು ಭಕ್ತಿಯಿಂದ ಭಾಗವಹಿಸಿದ್ದರು. ಕ್ರಿಸ್ಮಸ್‌ ಗೀತೆಗಳು (ಕ್ಯಾರೊಲ್ಸ್‌) ಆಚರಣೆಗೆ ವಿಶೇಷ ರಂಗು ನೀಡಿದವು. ಬಲಿ ಪೂಜೆ ಬಳಿಕ ಕ್ರೈಸ್ತ ಬಾಂಧವರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಕೇಕ್‌ ಕತ್ತರಿಸಿ, ಏಸು ಕ್ರಿಸ್ತರ ಹುಟ್ಟುಹಬ್ಬದ ಶಾಂತಿಯ ಸಂದೇಶ ಸಾರಲಾಯಿತು. ಕ್ರಿಸ್ಮಸ್‌ ತಾತಾ ‘ಸಾಂತಾಕ್ಲಾಸ್‌’ ಆಕರ್ಷಣೆಯಾಗಿತ್ತು. ಪುಟಾಣಿಗಳು ಸಾಂತಾ ಕ್ಲಾಸ್‌ನಿಂದ ಚಾಕಲೇಟ್‌ ಪಡೆದು ಸಂಭ್ರಮಿಸಿದರು.

ಸರಕಾರದ ಮಾರ್ಗಸೂಚಿಯಂತೆ ಎಲ್ಲ ಚರ್ಚ್‌ಗಳಲ್ಲಿ ಸರಳವಾಗಿ ಕಾರ್ಯಕ್ರಮ ನಡೆಸಲಾಯಿತು.

ರಿಪ್ಪನ್ ಪೇಟೆಯಗುಡ್ ಶೇಫರ್ಡ್  ಹಾಗೂ ಅರಸಾಳು ಗ್ರಾಮದ ಸಂತ ಫಾತಿಮಾ ಚರ್ಚ್‌ಗಳನ್ನು ಹಬ್ಬದ ಸಂಭ್ರಮದಲ್ಲಿ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್ ಆವರಣ, ಕ್ರೈಸ್ತರ ಮನೆಗಳು, ಪ್ರಮುಖ ಉದ್ಯಮ, ಅಂಗಡಿ, ಹೋಟೆಲ್‌ಗಳ ಎದುರು ಆಕರ್ಷಕ ಕ್ರಿಬ್‌ (ಗೋದಲಿ)ಗಳನ್ನು ನಿರ್ಮಿಸಲಾಗಿತ್ತು . ಕ್ರಿಸ್ಮಸ್‌ ಟ್ರೀ ಮತ್ತು ಅಲಂಕೃತ ನಕ್ಷತ್ರ ಗಮನ ಸೆಳೆಯುತ್ತಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

2 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

2 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

3 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

4 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

8 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

9 hours ago