ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪ್ರತಿಭಟನೆ :ಗ್ರಾಪಂ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾದರೂ ಏಕೆ ?? ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ  ಅಣ್ಣಪ್ಪರವರು ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ರವರ ಸಮ್ಮುಖದಲ್ಲಿ  ಬಿಜೆಪಿಗೆ ಸೇರಿದ್ದರು. ಈ ಬಗ್ಗೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮಹಾಲಕ್ಷ್ಮಿ  ಅಣ್ಣಪ್ಪರವರು ಈ ಕೂಡಲೇ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಲಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಮಹಾಲಕ್ಷ್ಮಿ ಅಣ್ಣಪ್ಪ ರವರನ್ನು ಕಳೆದ ಫೆಬ್ರವರಿಯಲ್ಲಿ ನಡೆದ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಒಂಬತ್ತು ಸದಸ್ಯರು ಅವರಿಗೆ ಮತ ನೀಡಿ ಗೆಲ್ಲಿಸಿದ್ದೆವು ಈಗ ಅವರ ಸ್ವಾರ್ಥಕ್ಕೊಸ್ಕರ ಬಿಜೆಪಿಗೆ ಹೋಗಿದ್ದಾರೆ.ಅವರಿಗೆ ಕಿಂಚಿತ್ತೂ ನೈತಿಕತೆ ಇದ್ದರೆ ಈ ಕೂಡಲೇ ರಾಜಿನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಲಿ ಎಂದರು.

ಸದಸ್ಯ ಮಧುಸೂದನ್ ಮಾತನಾಡಿ  ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿ ಉಪಾಧ್ಯಕ್ಷೆಯಾಗಿರುವ ಮಹಾಲಕ್ಷ್ಮಿ ರಾಜೀನಾಮೆ ನೀಡಿ ಹೊಸದಾಗಿ ಚುನಾವಣೆ ಎದುರಿಸಿ ಬರಲಿ ಅವರ ಎದುರು ನಾವು ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಸದಸ್ಯರು ಒಕ್ಕೊರಲ ನಿರ್ಧಾರವನ್ನು ಪ್ರಕಟಿಸುತ್ತಾ ಕೂಡಲೇ ರಾಜೀನಾಮೆ ಕೊಡುವಂತೆ ಒತ್ತಾಯಿಸಿ ಸಭೆಯನ್ನು ಬಹಿಷ್ಕರಿಸಿರುವುದಾಗಿ ಹೇಳಿ ಅಭಿವೃದ್ದಿಯ ಹಿತದೃಷ್ಟಿಯಿಂದ ಪಕ್ಷದಲ್ಲಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ವಿವರಿಸಿದರು.

ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್,ಗಣಪತಿ,ಧನಲಕ್ಷ್ಮಿ, ನಿರುಪಮಾ ರಾಕೇಶ್,ಸಾರಾಭಿ,ಪ್ರಕಾಶ್ ಪಾಲೇಕರ್ ಪಾಲ್ಗೊಂಡಿದ್ದರು.
ಪ್ರತಿಭಟನೆಯ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago