ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು.

ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕದ ಛಾಯೆ ಮೂಡಿತ್ತು ಆದರೆ ಇಂದು ಎಲ್ಲಾ ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದ್ದು ಪೋಷಕರು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೇ ಗೆ ಹಾಜರಾಗಬಹುದಾಗಿದೆ.

ಘಟನೆಯ ಹಿನ್ನಲೆ :

ಡಿ.1 ರಂದು ಪ್ರಥಮ ಪಿಯು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಸೋಮವಾರ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಮಂಗಳವಾರ ದಿನ ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್ ಪೇಟೆಯ ಪದವಿ ಪೂರ್ವ ಕಾಲೇಜಿಗೆ ಹೋಗಿರುವುದಾಗಿ ಮನೆಯವರು ತಿಳಿಸಿದ್ದಾರೆ.

ಕೂಡಲೇ ಎಚ್ಚೆತ್ತುಕೊಂಡ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಕಾಲೇಜಿಗೆ ಬಂದು ವಿದ್ಯಾರ್ಥಿಗೆ ಡಿ.14 ರವರೆಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಿದ್ದಾರೆ.. ನಂತರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ರವರು ಸಂಪೂರ್ಣ ಕಾಲೇಜನ್ನು  ಸ್ಯಾನಿಟೈಜರ್ ಮಾಡಿದ್ದರು,ಆತನ ತರಗತಿಯಲ್ಲಿ ಇದ್ದ ಎಲ್ಲಾ 56 ವಿದ್ಯಾರ್ಥಿಗಳ ಸ್ವ್ಯಾಬ್ ಪರೀಕ್ಷೆ ನಡೆಸಲಾಗಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

8 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago