ರಿಪ್ಪನ್ ಪೇಟೆ : ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಗ್ರಾಮ ಪಂಚಾಯ್ತಿ ಕುವೆಂಪು ಸಭಾಭವನದಲ್ಲಿ 22 ಜನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರವನ್ನು ಶಾಸಕರಾದ ಹರತಾಳು ಹಾಲಪ್ಪ ರವರು ವಿತರಣೆ ಮಾಡಿದರು.

ನಂತರ ಮಾತನಾಡಿದ ಶಾಸಕರು ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಕೂಡಾ ಅರಣ್ಯ ಭೂ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಭೂ ಒಡೆತನದ ಹಕ್ಕು ಕಲ್ಪಸಲು ಕಾನೂನು ಅಡ್ಡಿಯಾಗುತ್ತಿದೆ ಇಲಾಖೆಯಲ್ಲಿ ಡೀಮ್ಡ್ ಫಾರೆಸ್ಟ್, ಸ್ಟೇಟ್ ಪಾರೆಸ್ಟ್, ಮೀಸಲು ಅರಣ್ಯ, ಅಭಯಾರಣ್ಯ ಹೀಗೆ ಹತ್ತು ಹಲವು ವಿಭಾಗಗಳಿಂದಾಗಿ ರೈತರಿಗೆ ಭೂ ಮಂಜೂರಾತಿ ಪತ್ರ ಕೊಡಿಸಲು ಶಾಸನ ಸಭೆಯಲ್ಲಿ ಮತ್ತು ಹೋರಾಟದ ಮೂಲಕ ಪ್ರಯತ್ನಿಸಲಾಗಿದ್ದರೂ ಪ್ರಯೋಜನವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ ಗೃಹ ಸಚಿವರು ಮತ್ತು ನಾನು ಹಾಗೂ ಸ್ಪೀಕರ್ ಕಾಗೇರಿಯವರು ಸೇರಿದಂತೆ ಮಲೆನಾಡಿನ ಹಲವು ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ವಿಷಯ ಮಂಡಿಸಿ ಚರ್ಚಿಸಲಾಗಿದ್ದರೂ ಕಾರ್ಯಗತಗೊಂಡಿಲ್ಲ ಆದ್ದರಿಂದ ಸಂಸದರ ನೇತೃತ್ವದಲ್ಲಿ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ಕಾನೂನು ಸರಳಗೊಳಿಸುವ ಬಗ್ಗೆ ವಿಶ್ವಾಸವಿದೆ ಎಂದರು.

ನಿತ್ಯ ಕಛೇರಿ ಕೆಲಸ ಕಾರ್ಯಗಳಿಗೆ ಬರುವ ದೂರದೂರುಗಳ ರೈತ ವಿದ್ಯಾರ್ಥಿ ಸಮೂಹ ನಾಗರೀಕರ ಕೆಲಸ ಕಾರ್ಯಗಳಿಗೆ ಹಣಕೊಡದಿದ್ದರೆ ಅಲೆದಾಡಿಸಲಾಗುತ್ತದೆಂಬ ಬಗ್ಗೆ ನನ್ನ ಗಮನಕ್ಕೆ ಬಂದಿದೆ ತಾವು ಎರಡು ಮೂರು ದಿನದಲ್ಲಿ ಜಿಲ್ಲಾ ಕೇಂದ್ರಕ್ಕೆ ಮೀಟಿಂಗ್, ಈಟಿಂಗ್‌ಗೆ ಹೋಗುವ ಮಾರ್ಗದ ರಿಪ್ಪನ್‌ಪೇಟೆ ನಾಡಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು ನಾನು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಹೇಳಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ, ತಹಶೀಲ್ದಾರ್ ರಾಜೀವ್, ತಾ.ಪಂ. ಇಓ ಪ್ರವೀಣ್, ಪಿಡಿಓ ಜಿ.ಚಂದ್ರಶೇಖರ್, ಗ್ರಾ.ಪಂ. ಸದಸ್ಯರಾದ ಸುಧೀಂದ್ರ ಪೂಜಾರಿ,ಸುಂದರೇಶ್ ಹಾಗೂ ಇನ್ನಿತರರು ಪಕ್ಷದ ಮುಖಂಡರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

1 hour ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

1 hour ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

8 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago