ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ವಿನಾಯಕ ವೃತ್ತದಲ್ಲಿ ಗುರುವಾರ ರಾತ್ರಿ ಸುಮಾರು 9.15 ರ ಅಸುಪಾಸಿನ ಸಮಯದಲ್ಲಿ ತೀರ್ಥಹಳ್ಳಿ ರಸ್ತೆಯಿಂದ ಹೊಸನಗರ ರಸ್ತೆಯ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಟ್ರ್ಯಾಕ್ಟರ್ ನಲ್ಲಿ ಇದ್ದ ಕಪ್ಪು ಬಣ್ಣದ ಬ್ಯಾಗ್ ಕೆಳಗೆ ಬಿದ್ದು ಹೋಗಿದ್ದು ಅದರಲ್ಲಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಲು ಇಟ್ಟಿದ್ದ 1ಲಕ್ಷದ 40 ಸಾವಿರ ರೂ ಹಣ ಹಾಗೂ ಕೆಲವೊಂದು ಉಪಯುಕ್ತ ದಾಖಲಾತಿಗಳಿದ್ದೂ ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂತಿರುಗಿಸಬೇಕೆಂದು ಮಾಲೀಕರಾದ ಶ್ರೀಧರ್ ಅಲಸೆ ಇವರು ರಿಪ್ಪನ್ ಪೇಟೆ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹಣ ಹಿಂದಿರುಗಿಸಲು ಸಾಧ್ಯವಾಗದಿದ್ದರೂ ದಾಖಲಾತಿಗಳನ್ನು ಪೋಸ್ಟ್ ಮೂಲಕ ಹಿಂದಿರುಗಿಸುವಂತೆ ಮನವಿ ಮಾಡಿದ್ದಾರೆ.
ರಿಪ್ಪನ್ ಪೇಟೆಯ ಹೊಸನಗರ ರಸ್ತೆಯಿಂದ ಚಿಕ್ಕಜೇನಿಯವರೆಗಿನ ಮಧ್ಯದ ರಸ್ತೆಯಲ್ಲಿ ಈ ಕಪ್ಪು ಬಣ್ಣದ ಬ್ಯಾಗ್ ಬಿದ್ದುಹೋಗಿದ್ದು ಯಾರಿಗಾದರೂ ಸಿಕ್ಕರೆ ಕೂಡಲೇ ಸಂಪರ್ಕಿಸಲು ಮನವಿ ಮಾಡಿದ್ದಾರೆ.
ಯಾರಿಗಾದರು ಬ್ಯಾಗ್ ನ ಬಗ್ಗೆ ಮಾಹಿತಿ ದೊರೆತಲ್ಲಿ ಈ ಕೆಳಕಂಡ ಸಂಖ್ಯೆಗೆ ಸಂಪರ್ಕಿಸಲು ಮನವಿ ಮಾಡಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್