ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್ ಪೇಟೆಯ ಪದವಿ ಪೂರ್ವ ಕಾಲೇಜಿಗೆ ಹೋಗಿರುವುದಾಗಿ ಮನೆಯವರು ತಿಳಿಸಿದ್ದಾರೆ.
ಕೂಡಲೇ ಎಚ್ಚೆತ್ತುಕೊಂಡ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಕಾಲೇಜಿಗೆ ಬಂದು ವಿದ್ಯಾರ್ಥಿಗೆ ಡಿ.14 ರವರೆಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಿದ್ದಾರೆ.. ನಂತರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ರವರು ಸಂಪೂರ್ಣ ಕಾಲೇಜನ್ನು ಸ್ಯಾನಿಟೈಜರ್ ಮಾಡಿದ್ದಾರೆ.
ಆತನ ತರಗತಿಯಲ್ಲಿ ಇದ್ದ ಎಲ್ಲಾ 56 ವಿದ್ಯಾರ್ಥಿಗಳ ಸ್ವ್ಯಾಬ್ ಪರೀಕ್ಷೆ ನಡೆಸಲಾಗಿದೆ.
ಈ ಘಟನೆಯಿಂದ ರಿಪ್ಪನ್ ಪೇಟೆಯ ಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕದ ಛಾಯೆ ಮೂಡಿದೆ.ಮುಂದೆ ನಡೆಯುವ ಅನಾಹುತಗಳಿಗೆ ಸಂಬಂಧಪಟ್ಟ ಇಲಾಖೆಯವರು ಹೊಣೆಯಾಗಬೇಕು ಆಗುವುದು ಅನಿವಾರ್ಯವಾಗಿದೆ.
ಇನ್ನಾದರೂ ಎಚ್ಚೆತ್ತುಕೊಂಡು ಈಗ ಕರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗೆ ಸರಿಯಾದ ಚಿಕಿತ್ಸೆ ನೀಡಿ ಹಾಗೂ ಇನ್ನುಳಿದ ವಿದ್ಯಾರ್ಥಿಗಳಿಗೆ ಈ ಸೋಂಕು ಬರದಂತೆ ಮುಂಜಾಗ್ರತಾ ಕ್ರಮ ವಹಿಸದೆ ಇದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ.