ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.
ಈ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ ಸೆಳೆದ ಉರಿ ಸರ್ಜಿಕಲ್ ಸ್ಟ್ರೈಕ್ ಮುನ್ನಡೆಸಿದ್ದನ್ನು ದೇಶದ ಜನ ಮರೆಯಲಾರರು ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್, ಮಹಾಲಕ್ಷ್ಮಿ ಅಣ್ಣಪ್ಪ,ಬೆಳ್ಳೂರು ತಿಮ್ಮಪ್ಪ ,ಸುರೇಶ್ ಸಿಂಗ್, ಎನ್. ಸತೀಶ್,ಸುಧೀಂದ್ರ ಪೂಜಾರಿ,ಕಗ್ಗಲಿ ಲಿಂಗಪ್ಪ ,ಕೀರ್ತಿ ಗೌಡ ಕುಕ್ಕಳಲೆ, ಮಲ್ಲಿಕಾರ್ಜುನ್ ಜಿ.ಡಿ, ನಾಗರತ್ನ ದೇವರಾಜ್, ದೀಪಾ ಸುಧೀರ್, ರಾಘವೇಂದ್ರ, ಉಮಾ ಸುರೇಶ್, ಅಶ್ವಿನಿ ರವಿಶಂಕರ್, ವಿನೋದಮ್ಮ ಮತ್ತಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್