ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ.

ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ

ಡಿ.06 ರ ರಾತ್ರಿ 10.30 ರಿಂದ ಡಿ.07 ರ ರಾತ್ರಿ 07 ಗಂಟೆವರೆಗೆ ಎಲ್‍ಸಿ ನಂ 52 ರ ಕಾಶಿಪುರ ಮತ್ತು ಎಲ್‍ಸಿ ನಂ-49 ರ ಸವಳಂಗ ಮಾರ್ಗದ ಮೂಲಕ ಉಷಾ ನರ್ಸಿಂಗ್ ಹೋಂ ಜೈಲ್ ಸರ್ಕಲ್, ವಿನೋಬನಗರ ಪೊಲೀಸ್ ಚೌಕಿ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.

ಎಲ್‍ಸಿ ನಂ-79,ಸಾಗರ – ಆನಂದಪುರ ಮಾರ್ಗ

ಡಿ.09ರ ರಾತ್ರಿ 10.30 ರಿಂದ ಡಿ.10 ರ ರಾತ್ರಿ 07 ಗಂಟೆವರೆಗೆ ಚೋರಡಿ-ಶೆಟ್ಟಿಕೊಪ್ಪ-ಸೂಡೂರು-5ನೇ ಮೈಲಿಗಲ್-ಆಯನೂರು ಮತ್ತು ಎಲ್‍ಸಿ 73 ರ ಮಾರ್ಗವಾದ ಬಾಲೆಕೊಪ್ಪ ಚಿಕ್ಕಮರಸ-ಕುಂಸಿ ಮುಖಾಂತರ ಸಂಚರಿಸಲು ಅವಕಾಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

2 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

2 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

3 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

11 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

11 hours ago