ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ
ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ.

ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ.

ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್ ಉರುಳಿಬಿದ್ದ ಪರಿಣಾಮ ಶಶಿನಾಯ್ಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹೊಸ ಟ್ರಾಕ್ಟರ್ ಖರೀದಿಸಿ ಕೆಲವೇ ದಿನಗಳಲ್ಲಿ ಈ ದುರ್ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

1 hour ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

5 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

7 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

7 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

24 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 day ago