w
Headlines
Home » ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್ ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬಂದ ಮಾರುತಿ ಸಿಫ್ಟ್ ಕಾರು ಗುದ್ದಿದೆ.

 ಈ ಅಪಘಾತದಲ್ಲಿ ಯಡೇಹಳ್ಳಿಯ ಶಾರದಮ್ಮ (60), ಸುಮಾ(45) ಆನ್ವೇರಿಯ ದಾಕ್ಷಾಯಿಣಿ (45), ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕಾರಿನ ಚಾಲಕ ಸುನೀಲ್ ಎಂಬ ವ್ಯಕ್ತಿ ಮೆಗ್ಗಾನ್ ಗೆ ಚಿಕಿತ್ಸೆಗೆ ಕರೆದುಕೊಂಡು ಬರುವಾಗ ಸಾವನ್ನಪ್ಪಿದ್ದಾರೆ. ಆಶಾ ಎಂಬುವರು ತೀವ್ರವಾಗಿ ಗಾಯಗೊಂಡಿದ್ದು ಮೆಗ್ಗಾನ್ ತುರ್ತು ವಿಭಾಗದಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

 ಜೋಗ ಸಮೀಪದ ಚಿನ್ನಿಕಟ್ಟೆಯಲ್ಲಿ  ಮದುವೆಯ ಆರತಕ್ಷತೆ ಕಾರ್ಯಕ್ರಮಕ್ಕೆ ಹೋಗುವಾಗ ಈ ಅಪಘಾತ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.