ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ.
ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ ನರಸಿಂಹ ಮೂರ್ತಿ ಮತ್ತು ಮುಖ್ಯ ಅತಿಥಿಗಳಾದ ಶ್ರೀ ರಮೇಶ್ ಡಿ ವೈ ಎಸ್ ಪಿ ಮತ್ತು ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಕಿರಿಯ ವಯಸ್ಸಿನಲ್ಲೇ ಸಾಹಿತ್ಯದಲ್ಲಿ ನಿರತರಾದ ಇವರಿಗೆ ಉತ್ತಿಷ್ಠ ಸಾಧಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಒಟ್ಟಾರೆಯಾಗಿ ಮಲೆನಾಡು ಇಡೀ ದೇಶಕ್ಕೆ ಅದ್ವಿತೀಯ ಅಪ್ರತಿಮ ಸಾಧಕರನ್ನು ನೀಡಿದೆ ನಮ್ಮೂರಿನ ಹೆಮ್ಮೆಯ ಕವಯತ್ರಿಗೆ ಸಾವಿರಾರು ಜನರ ಸಮ್ಮುಖದಲ್ಲಿ ಸನ್ಮಾನಿಸಿದ್ದು ಮಾತ್ರ ನಿಜಕ್ಕೂ ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್