ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ
ಭಾರಿಸಿದ್ದಾರೆ.
ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ
ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ
ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ.
ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್.
ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ
ಚುನಾವಣೆಯ ಗೆಲುವಿನಿಂದ ಪರಿಷತ್ ಪ್ರವೇಶಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಎಮ್ಎಲ್ಸಿ ಆರ್. ಪ್ರಸನ್ನಕುಮಾರ್ 1820 ಮತ ಪಡೆದಿದ್ದರೆ, ಬಿಜೆಪಿ ಅರುಣ್ 2208 ಮತಗಳನ್ನು ಪಡೆದುಕೊಂಡಿದ್ದಾರೆ.
ಅರುಣ್ ಗೆಲುವಿನ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯ ಮತ್ತಷ್ಟು ಹೆಚ್ಚಿದ್ದು ಕಾಂಗ್ರೆಸ್ ಒಂದು ಪ್ರಮುಖ ಸ್ಥಾನವನ್ನು ಕಳೆದುಕೊಂಡಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್