ಸಾಗರ : ಇಂದು ಸಂಜೆ ನಡೆದ ಅವಘಡದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯೊಬ್ಬಳ ಮೇಲೆ ಮರದ ದಿಮ್ಮಿ ಹರಿದು ಸಾವನ್ನಪ್ಪಿರುವ ಘಟನೆ ಸಾಗರದ ಹುಲಿದೇವರ ಬನದಲ್ಲಿರುವ MPM ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಇಂದು ಸಂಜೆ ಸುಮಾರು 4-30ರ ಸಮಯದಲ್ಲಿ ಮರಗಳನ್ನ ಕಡಿದು ಒಂದರ ಮೇಲೊಂದು ಮರದ ದಿಮ್ಮಿಗಳನ್ನ ಸಿಪ್ಪೆ ಸುಲಿದು ಜೋಡಿಸಿ ಇಡಲಾಗಿತ್ತು. ಮರದ ದಿಮ್ಮಿಯ ಕೆಳಗೆ 6 ವರ್ಷದ ಶ್ರಾವಣಿ ಎಂಬ ಹೆಣ್ಣು ಮಗು ಆಡುತ್ತಿದ್ದ ವೇಳೆ ಜೋಡಿಸಿದ ಮರದ ದಿಮ್ಮಿ ಚದುರಿಹೋಗಿದ್ದು ಮಗುವಿನ ಮೇಲೆ ಹರಿದಿದೆ.
ತೀವ್ರವಾಗಿ ಗಾಯಗೊಂಡಿದ್ದ ಈ ಮಗುವನ್ನ ಸಾಗರದ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಗು ಕೊನೆ ಉಸಿರು ಎಳೆದಿದೆ. ಮಗುವನ್ನ ಶ್ರಾವಣಿ ಎಂದು ಗುರುತಿಸಲಾಗಿದೆ. ಧಾರವಾಡದ ಕಲಘಟಗಿಯಿಂದ ಕಳೆದ ಮೂರು ತಿಂಗಳ ಹಿಂದೆ ಮರಕಡಿಯುವ ಕೆಲಸಕ್ಕೆ ಬಂದ ವೇಳೆ ದಂಪತಿಗಳು ತಮ್ಮ ಮೂರನೇ ಮಗುವನ್ನ ಕಳೆದುಕೊಂಡಿದ್ದಾರೆ.
ಮೂರು ತಿಂಗಳ ಹಿಂದೆ ಈ MPM ಅರಣ್ಯ ಪ್ರದೇಶದ ಮರ ಕಡಿತಲೆಗೆ ಗುತ್ತಿಗೆ ಪಡೆದಿದ್ದ ಸಿದ್ದವೀರಪ್ಪನವರು 30-35 ಜನರನ್ನ ಕರೆಸಿಕೊಂಡಿದ್ದಾರೆ. ಇದರಲ್ಲಿ ರವಿ ಮತ್ತು ಮಂಜುಳಾ ಎಂಬುವರು ಕೆಲಸಕ್ಕೆ ಒಂದು ಗಂಡು ಒಂದು ಹೆಣ್ಣು ಮಗುವಿನೊಂದಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಒಟ್ಟು ಮೂರು ಜನ ಮಕ್ಕಳಿರುವ ರವಿ ಎಂಬ ದಂಪತಿಯವರಿಗೆ ಒಬ್ಬ ಮಗ ಕಲಘಟಗಿಯಲ್ಲಿ ಶಾಲೆಗೆ ಹೋಗುತ್ತಿದ್ದಾನೆ. ಇನ್ನೊಬ್ಬ ಮಗ ಮತ್ತು ಶ್ರಾವಣಿಯೊಂದಿಗೆ ಬಂದಿದ್ದ ಇವರು ಇಂದು ನಡೆದ ವಿಧಿಯಾಟದಲ್ಲಿ ಆರು ವರ್ಷದ ಶ್ರಾವಣಿಯನ್ನ ಕಳೆದುಕೊಂಡಿದ್ದಾರೆ.* ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್