ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ
ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …