ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು.

ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1996 ರಲ್ಲಿ ಹೆಚ್.ಡಿ.ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದ ದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸಿದ್ಧರಾಮಯ್ಯ ಅವರು ಅಹಿಂದ ಚಳವಳಿಯನ್ನು ಸಂಘಟಿಸಲು ಮುಂದಾದ ಕಾಲದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಂತಿದ್ದರು.
ಜಾಲಪ್ಪ ಅವರ ನಿಧನಕ್ಕೆ ರಾಜ್ಯದೆಲ್ಲೆಡೆಯಿಂದ ಸಂತಾಪ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *