Headlines

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ. 

Read More

ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.  ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ನಾನು ಕ್ಷೇತ್ರದಲ್ಲಿ ಇರುವುದು ಕಿಮ್ಮನೆ ಅವರಿಗೆ ಸಹಿಸಲು ಆಗುತ್ತಿಲ್ಲ – ಆರಗ ಜ್ಞಾನೇಂದ್ರ

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ…

Read More