ಆನಂದಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ !! ವಸತಿ ಶಾಲೆ ಪ್ರಿನ್ಸಿಪಲ್ ಎತ್ತಂಗಡಿ ??
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆನೇ ಹಾಸ್ಟೆಲ್ ನಿಂದ ಹೊರ ಬಂದು ಎಡೆಹಳ್ಳಿಯ ಗಣಪತಿ ದೇವಸ್ಥಾನದ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದರು. ಹಾಸ್ಟೆಲ್ ನ ಪ್ರಿನ್ಸಿಪಾಲ್ ಬಿ ಕೆ ಚಂದ್ರಪ್ಪ ಹಾಗೂ ಕೆಲ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿದ್ದು ಬೂಟುಕಾಲಿನಿಂದ ಒದ್ದು ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಹಾಗೂ ಊಟದಲ್ಲಿ ಹುಳ ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ಉಣಬಡಿಸುತ್ತಿದ್ದು ಕೇಳಿದರೆ ವಿದ್ಯಾರ್ಥಿಗಳಿಗೆ…
 
                         
                         
                         
                         
                         
                         
                         
                         
                        