ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!
ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ. ಒಂದು ಕಡೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…